ಕಲಬುರಗಿ, 30 ಮೇ (ಹಿ.ಸ.) :
ಆ್ಯಂಕರ್ : ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧಿ ಕೇಂದ್ರಕ್ಕೆ ಬ್ಯಾನ್ ಮಾಡಿ ರಾಜ್ಯ ಸರ್ಕಾರ ಆದೇಶಿಸಿದ ಹಿನ್ನೆಲೆಯಲ್ಲಿ ಕಲಬುರಗಿಯಲ್ಲಿ ಬಿಜೆಪಿ ಮುಖಂಡರು ಮೌನ ಪ್ರತಿಭಟನೆ ಮಾಡುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ನಗರದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿರುವ ಜನೌಷಧಿ ಕೇಂದ್ರ ಬಳಿ ಬಿಜೆಪಿಯ ಕಾರ್ಯಕರ್ತರು ಕೈಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಮೌನ್ ಪ್ರತಿಭಟನೆ ನಡೆಸಿದರು.
ಜನೌಷಧಿ ಕೇಂದ್ರಗಳು ಸರ್ಕಾರಿ ಆಸ್ಪತ್ರೆಗೆ ಬರುವ ಗ್ರಾಮೀಣ ಭಾಗದ ಜನರಿಗೆ ಬಡ ರೋಗಿಗಳಿಗೆ ತುಂಬ ಸಹಕಾರವಾಗಿದ್ದು, ಕೇಂದ್ರ ಸರ್ಕಾರದ ಬಡವರ ಆರೋಗ್ಯ ಕಾಳಜಿ ಹಿನ್ನಲೆ ಸ್ಥಾಪಿಸಿದೆ. ಆದರೆ, ಇದು ಕೇಂದ್ರ ಸರ್ಕಾರದ ಯೋಜನೆ ಎಂಬ ಕಾರಣಕ್ಕೆ ಸ್ಥಗಿತಗೊಳಿಸುವ ಹುನ್ನಾರ ರಾಜ್ಯ ಸರ್ಕಾರ ನಡೆಸಿದೆ ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ನಗರಾಧ್ಯಕ್ಷ ಚಂದ್ರು ಪಾಟೀಲ್, ಶಾಸಕ ಅವಿನಾಶ್ ಜಾಧವ, ಅವ್ವಣ್ಣಾ ಮ್ಯಾಕೇರಿ, ಶರಣಪ್ಪ ತಳವಾರ ಸೇರಿದಂತೆ ಅನೇಕ ಬಿಜೆಪಿ ಮುಖಂಡರು ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / Samarth biral