ಮಂಗಳೂರು, 30 ಮೇ (ಹಿ.ಸ.) :
ಆ್ಯಂಕರ್ : ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಭಾರೀ ಮಳೆಯ ಕಾರಣದಿಂದ ಈ ಎರಡು ಜಿಲ್ಲೆಗಳಲ್ಲಿ ಅಂಗನವಾಡಿಗಳು ಮತ್ತು ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಮಳೆಹಾನಿಯ ಭೀತಿಯಿಂದ ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ತೆಗೆದುಕೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಂಗನವಾಡಿಗಳ ಜೊತೆಗೆ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಾದ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಇದೇ ರೀತಿ, ಉಡುಪಿ ಜಿಲ್ಲೆಯಲ್ಲಿ 1 ರಿಂದ 10ನೇ ತರಗತಿಯವರೆಗೆ ಎಲ್ಲಾ ಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ.
ಮಳೆಯ ಅಬ್ಬರ ಮುಂದುವರಿಯುವ ನಿರೀಕ್ಷೆಯಿದ್ದು, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಲು ಜಿಲ್ಲಾಡಳಿತ ಸಾರ್ವಜನಿಕರಿಗೆ ಮನವಿ ಮಾಡಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa