ನಟ ದರ್ಶನ್‌ ವಿದೇಶ ಪ್ರವಾಸಕ್ಕೆ ನ್ಯಾಯಾಲಯ ಅನುಮತಿ
ಬೆಂಗಳೂರು, 30 ಮೇ (ಹಿ.ಸ.) : ಆ್ಯಂಕರ್ : ಚಿತ್ರದುರ್ಗ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಸ್ಯಾಂಡಲ್‌ವುಡ್ ನಟ ದರ್ಶನ್‌ ಅವರು ಚಲನಚಿತ್ರ ಚಿತ್ರೀಕರಣಕ್ಕಾಗಿ ವಿದೇಶ ಪ್ರವಾಸಕ್ಕೆ ತೆರಳಲು ಅನುಮತಿ ಕೋರಿದ್ದ ಅರ್ಜಿಗೆ ಬೆಂಗಳೂರಿನ 64ನೇ ಸೆಷನ್ಸ್ ನ್ಯಾಯಾಲಯ ಅನುಮತಿ ನೀಡಿದೆ. ನಟ ದರ್ಶನ
Darshan


ಬೆಂಗಳೂರು, 30 ಮೇ (ಹಿ.ಸ.) :

ಆ್ಯಂಕರ್ : ಚಿತ್ರದುರ್ಗ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಸ್ಯಾಂಡಲ್‌ವುಡ್ ನಟ ದರ್ಶನ್‌ ಅವರು ಚಲನಚಿತ್ರ ಚಿತ್ರೀಕರಣಕ್ಕಾಗಿ ವಿದೇಶ ಪ್ರವಾಸಕ್ಕೆ ತೆರಳಲು ಅನುಮತಿ ಕೋರಿದ್ದ ಅರ್ಜಿಗೆ ಬೆಂಗಳೂರಿನ 64ನೇ ಸೆಷನ್ಸ್ ನ್ಯಾಯಾಲಯ ಅನುಮತಿ ನೀಡಿದೆ.

ನಟ ದರ್ಶನ್ ಜೂನ್ 1ರಿಂದ 25ರವರೆಗೆ ದುಬೈ ಮತ್ತು ಯೂರೋಪ್‌ಗೆ ತೆರಳಲು ವಿನಂತಿಸಿದ್ದರು. ನ್ಯಾಯಮೂರ್ತಿ ಐ.ಪಿ. ನಾಯ್ಕ ಅವರು ಈ ಅರ್ಜಿ ವಿಚಾರಣೆ ನಡೆಸಿ, ದರ್ಶನ ವಿದೇಶ ಪ್ರವಾಸಕ್ಕೆ ಅನುಮತಿ ನೀಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande