ಕುಷ್ಟಗಿ ಪುರಸಭೆ : ಆಕ್ಷೇಪಣೆ ಆಹ್ವಾನ
ಕೊಪ್ಪಳ, 30 ಮೇ (ಹಿ.ಸ.) : ಆ್ಯಂಕರ್ : ಕುಷ್ಟಗಿ ಪುರಸಭೆ ವ್ಯಾಪ್ತಿಯಲ್ಲಿ ಸಾರ್ವಜನಿಕ ಉಪಯೋಗಕ್ಕಾಗಿ ಮೀಸಲಿಟ್ಟ ನಿವೇಶನಗಳನ್ನು ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಹಾಗೂ ಬಾಲಭವನ ನಿರ್ಮಾಣಕ್ಕಾಗಿ ನೀಡಲು ಸಾಮಾನ್ಯ ಸಭೆಯಲ್ಲಿ ನಿರ್ಧರಿಸಲಾಗಿದ್ದು, ಈ ಕುರಿತು ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿ
ಕುಷ್ಟಗಿ ಪುರಸಭೆ : ಆಕ್ಷೇಪಣೆ ಆಹ್ವಾನ


ಕೊಪ್ಪಳ, 30 ಮೇ (ಹಿ.ಸ.) :

ಆ್ಯಂಕರ್ : ಕುಷ್ಟಗಿ ಪುರಸಭೆ ವ್ಯಾಪ್ತಿಯಲ್ಲಿ ಸಾರ್ವಜನಿಕ ಉಪಯೋಗಕ್ಕಾಗಿ ಮೀಸಲಿಟ್ಟ ನಿವೇಶನಗಳನ್ನು ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಹಾಗೂ ಬಾಲಭವನ ನಿರ್ಮಾಣಕ್ಕಾಗಿ ನೀಡಲು ಸಾಮಾನ್ಯ ಸಭೆಯಲ್ಲಿ ನಿರ್ಧರಿಸಲಾಗಿದ್ದು, ಈ ಕುರಿತು ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.

ಕುಷ್ಟಗಿ ಪಟ್ಟಣದ 11 ಅಂಗನವಾಡಿ ಕೇಂದ್ರಗಳಿಗೆ ಪಟ್ಟಣದ ವಿವಿಧ ಸರ್ವೇ ನಂಬರ್‍ಗಳಾದ 46/1 ಹಾಗೂ 46/1ಬಿ, 218/4, 53/2ಬಿ2, 113/1, 53/3, 221/2, 111/1, 453/2, 53/2ಬಿ4 ಮತ್ತು 53/9, 118/4 ಹಾಗೂ 112/ಬಿ ವಸತಿ ವಿನ್ಯಾಸದಲ್ಲಿರುವ ಸಾರ್ವಜನಿಕ ಉಪಯೋಗಕ್ಕಾಗಿ ಮೀಸಲಿಟ್ಟ ನಿವೇಶನಗಳನ್ನು ಅಂಗನವಾಡಿ ಕಟ್ಟಡ ಹಾಗೂ ಬಾಲಭವನ ನಿರ್ಮಾಣಕ್ಕೆ ನೀಡಲು ದಿನಾಂಕ: 08-05-2025 ರಂದು ನಡೆದ ಪುರಸಭೆ ಸಾಮಾನ್ಯ ಸಭೆಯಲ್ಲಿ ಸರ್ವ ಸದಸ್ಯರು ಒಪ್ಪಿಗೆ ನೀಡಿರುತ್ತಾರೆ.

ಆದ್ದರಿಂದ ಮೇಲ್ಕಂಡ ಸರ್ವೇ ನಂಬರ್‍ಗಳ ನಿವೇಶನಗಳಲ್ಲಿ ಉದ್ದೇಶಿತ ಕಟ್ಟಡ ನಿರ್ಮಾಣ ಕುರಿತಂತೆ ಸಾರ್ವಜನಿಕರಿಂದ ತಕಾರಾರುಗಳಿದ್ದಲ್ಲಿ, ಈ ಪ್ರಕಟಣೆ ಹೊರಡಿಸಿದ 15 ದಿನಗಳೊಳಗಾಗಿ ಪುರಸಭೆಗೆ ಲಿಖಿತವಾಗಿ ಆಕ್ಷೇಪಣೆಗಳನ್ನು ಸಲ್ಲಿಸಬೇಕು ಎಂದು ಪುರಸಭೆ ಮುಖ್ಯಾಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande