ನವದೆಹಲಿ, 30 ಮೇ (ಹಿ.ಸ.) :
ಆ್ಯಂಕರ್ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬಿಹಾರ ಹಾಗೂ ಉತ್ತರ ಪ್ರದೇಶದಲ್ಲಿ ₹60,000 ಕೋಟಿ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಇಂದು ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಲಿದ್ದಾರೆ.
ಬಿಹಾರದಲ್ಲಿ ವಿದ್ಯುತ್, ರಸ್ತೆ ಮತ್ತು ರೈಲು ಸಂಪರ್ಕ ಯೋಜನೆಗಳಿಗೆ ಚಾಲನೆ ನೀಡಿಲಿದ್ದು, ನಬಿನಗರ ವಿದ್ಯುತ್ ಯೋಜನೆ ಪ್ರಮುಖವಾಗಿದೆ.
ಉತ್ತರ ಪ್ರದೇಶದ ಕಾನ್ಪುರದಲ್ಲಿ ₹2,120 ಕೋಟಿ ಮೆಟ್ರೋ ಯೋಜನೆ, ಪಂಕಿ ಹಾಗೂ ಘಟಂಪುರ ಉಷ್ಣ ವಿದ್ಯುತ್ ಯೋಜನೆಗಳು, ಒಳಚರಂಡಿ ನೀರಿನ ಶುದ್ಧೀಕರಣ ಘಟಕ ಮತ್ತು ರಕ್ಷಣಾ ಕಾರಿಡಾರ್ ರಸ್ತೆಗಳ ಅಭಿವೃದ್ಧಿಗೆ ಚಾಲನೆ ನೀಡಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa