ಬಳ್ಳಾರಿ, 30 ಮೇ (ಹಿ.ಸ.) :
ಆ್ಯಂಕರ್ : ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಬಳ್ಳಾರಿ ಪ್ರಾದೇಶಿಕ ಕಚೇರಿ ವತಿಯಿಂದ ಜೂನ್ 05 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಇವರ ಸಂಯುಕ್ತಾಶ್ರಯಲ್ಲಿ ಆಯೋಜಿಸಲಾಗುತ್ತಿದ್ದು, ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವಾಗಿದೆ ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಬಳ್ಳಾರಿ ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್