ಮೆಟ್ರಿಕ್ ನಂತರದ ವಸತಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
ಕೊಪ್ಪಳ, 31 ಮೇ (ಹಿ.ಸ.) : ಆ್ಯಂಕರ್ : 2025-26ನೇ ಸಾಲಿಗಾಗಿ ಕೊಪ್ಪಳ ಜಿಲ್ಲೆಯ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಸತಿ ನಿಲಯಗಳ (ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮೋ ಹಾಗೂ ಪ್ರಥಮ ವರ್ಷದ ಪದವಿ ಮಟ್ಟದ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮೆಟ್ರಿಕ್ ನಂತರದ ವಸತಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ


ಕೊಪ್ಪಳ, 31 ಮೇ (ಹಿ.ಸ.) :

ಆ್ಯಂಕರ್ : 2025-26ನೇ ಸಾಲಿಗಾಗಿ ಕೊಪ್ಪಳ ಜಿಲ್ಲೆಯ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಸತಿ ನಿಲಯಗಳ (ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮೋ ಹಾಗೂ ಪ್ರಥಮ ವರ್ಷದ ಪದವಿ ಮಟ್ಟದ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು/ಪೋಷಕರು ಎಸ್‍ಹೆಚ್‍ಪಿ ಪೋರ್ಟಲ್ hಣಣಠಿs://shಠಿ.ಞಚಿಡಿಟಿಚಿಣಚಿಞಚಿ.gov.iಟಿ/ ಮೂಲಕ ಜೂನ್ 28 ರೊಳಗೆ ಆನ್‍ಲೈನ್ ಅರ್ಜಿ ಸಲ್ಲಿಸಿ, ಅರ್ಜಿ ಪ್ರತಿ ಹಾಗೂ ಎಲ್ಲಾ ದಾಖಲೆಗಳನ್ನು ಸಂಬಂಧಿಸಿದ ವಸತಿ ನಿಲಯಗಳಿಗೆ ಸಲ್ಲಿಸಬೇಕು. ಕೊನೆಯ ದಿನಾಂಕದ ನಂತರ ಸ್ವೀಕೃತವಾಗುವ ಯಾವುದೇ ಅರ್ಜಿ/ಕೋರಿಕೆಗಳನ್ನು ಪರಿಗಣಿಸಲು ಅವಕಾಶವಿರುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಎಸ್‍ಹೆಚ್‍ಪಿ ಪೋರ್ಟಲ್ ಅಥವಾ ವೆಬ್‍ಸೈಟ್ ಅನ್ನು ವೀಕ್ಷಿಸಬಹುದು ಅಥವಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಆಜಾದ್ ಭವನ ಕೊಪ್ಪಳ, ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಆಜಾದ್ ಶಾಲೆ ಹತ್ತಿರ ಗಂಗಾವತಿ, ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ತಹಶೀಲ್ದಾರ ಕಾರ್ಯಾಲಯ ಆವರಣ ಯಲಬುರ್ಗಾ, ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ದೇವರಾಜ ಅರಸು ಭವನ ಕೊಪ್ಪಳ ರಸ್ತೆ ಕುಷ್ಟಗಿ, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳ ಕಾರ್ಯಾಲಯ, ಮೌಲಾನಾ ಆಜಾದ್ ಭವನ ಕೊಪ್ಪಳ ಕಛೇರಿ ದೂರವಾಣಿ: 08539-225070 ಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande