ಬಳ್ಳಾರಿ, 31 ಮೇ (ಹಿ.ಸ.) :
ಆ್ಯಂಕರ್ : ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಮತ್ತು ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಪ್ರಸಕ್ತ ಸಾಲಿನ 6ನೇ ತರಗತಿ ದಾಖಲಾತಿಗೆ ಈಗಾಗಲೇ ಪ್ರವೇಶ ಪರೀಕ್ಷೆ ನಡೆದಿದ್ದು, ಆಯ್ಕೆಯಾದ ವಿದ್ಯಾರ್ಥಿಗಳಿಗೆ ಜೂನ್ 03 ರಂದು ಕೌನ್ಸಲಿಂಗ್ ಪ್ರಕ್ರಿಯೆ ಏರ್ಪಡಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಅವರು ತಿಳಿಸಿದ್ದಾರೆ.
ನಗರದ ಹೊಸಪೇಟೆ ರಸ್ತೆಯ ಅಲ್ಲಿಪುರದ ಬಿಐಟಿಎಂ ಕಾಲೇಜು ಹತ್ತಿರ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ಜೂ 03 ರಂದು ಬೆಳಿಗ್ಗೆ 10 ಗಂಟೆಗೆ 6ನೇ ತರಗತಿ ಪ್ರವೇಶ ಪರೀಕ್ಷೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕೌನ್ಸಲಿಂಗ್ ಮೂಲಕ ಪ್ರವೇಶದ ಸೀಟ್ನ್ನು (ವಸತಿ ಶಾಲೆಯನ್ನು) ಆಯ್ಕೆ ಮಾಡಿಕೊಳ್ಳಬಹುದಾಗಿದೆ.
*ಕೌನ್ಸಲಿಂಗ್ಗೆ ಬೇಕಾದ ದಾಖಲೆಗಳು:*
ಆಧಾರ್ಕಾರ್ಡ್, ವಿದ್ಯಾರ್ಥಿಯ 5 ಭಾವಚಿತ್ರ, 5ನೇ ತರಗತಿ ಅಂಕಪಟ್ಟಿ, ಹಾಲ್ ಟಿಕೆಟ್ (ಪ್ರವೇಶ ಪತ್ರ), ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಿಶೇಷ ಕೋಟಾದಲ್ಲಿ ಆಯ್ಕೆಯಾದ ಪ್ರಮಾಣ ಪತ್ರ ಸೇರಿದಂತೆ ಎಲ್ಲಾ ದಾಖಲೆಗಳನ್ನು ದ್ವಿ ಪ್ರತಿಯ ಝೆರಾಕ್ಸ್ಗಳನ್ನು ಹಾಜರುಪಡಿಸಬೇಕು.
ಹೆಚ್ಚಿನ ಮಾಹಿತಿಗಾಗಿ ನಗರದ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ(ಸಿ.ಬಿ.ಎಸ್.ಇ) ಮತ್ತು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರ ಮೊ.9844040035, ಸಂಡೂರು ತಾಲ್ಲೂಕಿನ ತೋರಣಗಲ್ಲು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರ ಮೊ.9480933730, ಕಂಪ್ಲಿ ಮತ್ತು ಕುರುಗೋಡು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರ ಮೊ.7353346069 ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್