ಬಾದಾಮಿ, 31 ಮೇ (ಹಿ.ಸ.) :
ಆ್ಯಂಕರ್ : ಅಪರಿಚಿತ ವಾಹನ ಡಿಕ್ಕಿಯಾಗಿ ತಂದೆ ಮತ್ತು ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕುಳಗೇರಿ ಕ್ರಾಸ್ ಬಳಿ ನಡೆದಿದೆ.
ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿಯಾಗಿ ದೇವಸ್ಥಾನಕ್ಕೆ ತೆರಳುತ್ತಿದ್ದ ಬಸವರಾಜ ಬಂಡಿವಡ್ಡರ್(26) ಮತ್ತು ಹುಲಿಗೆಮ್ಮ(3) ಮೃತಪಟ್ಟಿದ್ದಾರೆ. ಹಳಗೇರಿ ಆಂಜನೇಯ ದೇವಸ್ಥಾನಕ್ಕೆ ಹೊರಟಿದ್ದಾಗ ಈ ದುರಂತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಬಾದಾಮಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa