ಸರ್ಕಾರಿ ಪಾಲಿಟೆಕ್ನಿಕ್ ಡಿಪ್ಲೋಮಾ ಪ್ರಥಮ ವರ್ಷಕ್ಕೆ ಅರ್ಜಿ ಆಹ್ವಾನ
ಬಳ್ಳಾರಿ, 31 ಮೇ (ಹಿ.ಸ.) : ಆ್ಯಂಕರ್ : ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ 2025-26ನೇ ಸಾಲಿಗೆ ಪ್ರಥಮ ಸೆಮಿಸ್ಟರ್ ಡಿಪ್ಲೋಮಾ ಕೋರ್ಸ್ ಪ್ರವೇಶಾತಿಗೆ ಆಫ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಕಾಲೇಜಿನಲ್ಲಿ ಪಡೆದುಕೊಂಡು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಗಳನ್ನು
ಸರ್ಕಾರಿ ಪಾಲಿಟೆಕ್ನಿಕ್ ಡಿಪ್ಲೋಮಾ ಪ್ರಥಮ ವರ್ಷಕ್ಕೆ ಅರ್ಜಿ ಆಹ್ವಾನ


ಬಳ್ಳಾರಿ, 31 ಮೇ (ಹಿ.ಸ.) :

ಆ್ಯಂಕರ್ : ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ 2025-26ನೇ ಸಾಲಿಗೆ ಪ್ರಥಮ ಸೆಮಿಸ್ಟರ್ ಡಿಪ್ಲೋಮಾ ಕೋರ್ಸ್ ಪ್ರವೇಶಾತಿಗೆ ಆಫ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು ಕಾಲೇಜಿನಲ್ಲಿ ಪಡೆದುಕೊಂಡು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಗಳನ್ನು ಪಾಲಿಟೆಕ್ನಿಕ್‍ನ ಪ್ರಾಂಶುಪಾಲರ ಕಚೇರಿಗೆ ಜೂನ್ 02 ಸಂಜೆ 05 ಗಂಟೆಯವರೆಗೆ ಸಲ್ಲಿಸಬಹುದು.

ಜೂನ್ 03 ರಂದು ಬೆಳಿಗ್ಗೆ 11 ಗಂಟೆಗೆ ತಾತ್ಕಾಲಿಕ ಮೆರಿಟ್ ಪಟ್ಟಿ ಪ್ರಕಟ, ಅಂದು ಸಂಜೆ 04 ರ ವರೆಗೆ ತಿದ್ದುಪಡಿಗೆ ಅವಕಾಶ, ಸಂಜೆ 05 ಗಂಟೆಯವರೆಗೆ ಅಂತಿಮ ಮೆರಿಟ್ ಪಟ್ಟಿ ಪ್ರಕಟಿಸಲಾಗುವುದು. ಜೂನ್ 04 ರಿಂದ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಲಿದೆ.

ಹೆಚ್ಚಿನ ಮಾಹಿತಿಗಾಗಿ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್ ನ ಪ್ರಾಚಾರ್ಯರ ಕಚೇರಿ ಅಥವಾ ದೂ.08392-242228 ಗೆ ಸಂಪರ್ಕಿಸಬಹುದು ಎಂದು ಸರ್ಕಾರಿ ಪಾಲಿಟೆಕ್ನಿಕ್ ನ ಪ್ರಾಂಶುಪಾಲರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande