ಆನೆ-ಮಾನವ ಸಂಘರ್ಷ ತಡೆಗೆ ಜೇನು ಕೃಷಿ ಸೂಕ್ತ : ಸಚಿವ ಲಾಡ್
ಬೆಂಗಳೂರು, 31 ಮೇ (ಹಿ.ಸ.) : ಆ್ಯಂಕರ್ : ರಾಜ್ಯದಲ್ಲಿ ಹಲವು ಕಡೆ ಮಾನವ ಪ್ರಾಣಿ ಸಂಘರ್ಷದ ವೇಳೆ ಪ್ರಾಣಹಾನಿ ಆಗಿರುವ ಬಗ್ಗೆ ಮತ್ತು ಇದಕ್ಕೆ ವೈಜ್ಞಾನಿಕ ಪರಿಹಾರ ಒದಗಿಸುವ ಬಗ್ಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಗಂಭೀರ ಚರ್ಚೆ ನಡೆಯಿತು. ಈ ವೇಳೆ ಸಚಿವ ಸಂತೋಷ್ ಲಾಡ್ ಜೇ
Meeting


ಬೆಂಗಳೂರು, 31 ಮೇ (ಹಿ.ಸ.) :

ಆ್ಯಂಕರ್ : ರಾಜ್ಯದಲ್ಲಿ ಹಲವು ಕಡೆ ಮಾನವ ಪ್ರಾಣಿ ಸಂಘರ್ಷದ ವೇಳೆ ಪ್ರಾಣಹಾನಿ ಆಗಿರುವ ಬಗ್ಗೆ ಮತ್ತು ಇದಕ್ಕೆ ವೈಜ್ಞಾನಿಕ ಪರಿಹಾರ ಒದಗಿಸುವ ಬಗ್ಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಗಂಭೀರ ಚರ್ಚೆ ನಡೆಯಿತು. ಈ ವೇಳೆ ಸಚಿವ ಸಂತೋಷ್ ಲಾಡ್ ಜೇನು ಕೃಷಿ ಬಗ್ಗೆ ಮುಖ್ಯಮಂತ್ರಿಗಳಿಗೆ ವಿವರಿಸಿದರು.

ಆನೆಗಳು ಜೇನು ನೊಣ ಇರುವ ಪ್ರದೇಶಕ್ಕೆ ಬರುವುದಿಲ್ಲ. ಹೀಗಾಗಿ ಆನೆ ಬ್ಯಾರಿಕೇಡ್ ಹಾಕಿರುವ ಮಾರ್ಗದುದ್ದಕ್ಕೂ ಜೇನು ಕೃಷಿ ಮಾಡಿದರೆ ರೈತರಿಗೂ ಅನುಕೂಲ, ಆನೆಗಳ ಕಾಟವೂ ತಪ್ಪುತ್ತದೆ ಎಂದು ವಿವರಿಸಿದರು. ಸಚಿವರ ಸಲಹೆ ಕುರಿತು ಪರಿಶೀಲಿಸಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande