ಬಳ್ಳಾರಿ, 31 ಮೇ (ಹಿ.ಸ.) :
ಆ್ಯಂಕರ್ : ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿನ ಯು.ಪಿ.ಎಸ್.ಸಿ ನಾಗರಿಕ ಸೇವೆ ಮತ್ತು ಬ್ಯಾಂಕಿಂಗ್ ಪಿ.ಒ ಸ್ಫರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ ನೀಡಲಾಗುತ್ತಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗೆ ಸೇರಿದ ಅಭ್ಯರ್ಥಿಗಳು ಇಲಾಖೆಯ ವೆಬ್‍ಸೈಟ್ https://bcwd.karnataka.gov.in ಅಥವಾ sevasindhuservices.karnataka.gov.in ಗೆ ಬೇಟಿ ನೀಡಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂ.080392-275751, ಸಹಾಯವಾಣಿ ಸಂ. 8050770006, 8050370006 ಸಂಪರ್ಕಿಸಬಹುದು ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್