ಕೋಳೂರು ಸರ್ಕಾರಿ ಆಯುರ್ವೇದ ಚಿಕಿತ್ಸಾಲಯದ ನೂತನ ಕಟ್ಟಡ ಉದ್ಘಾಟನೆ
ಬಳ್ಳಾರಿ, 31 ಮೇ (ಹಿ.ಸ.) : ಆ್ಯಂಕರ್ : ಕುರುಗೋಡು ತಾಲ್ಲೂಕಿನ ಕೋಳೂರು ಗ್ರಾಮದಲ್ಲಿ ನೂತನ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯವನ್ನು ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಅವರು ಶನಿವಾರ ಉದ್ಘಾಟಿಸಿದ್ದಾರೆ. ನಂತರ ಮಾತನಾಡಿದ ಅವರು, ಯಾವುದೇ ಅಡ್ಡ ಪರಿಣಾಮಗಳಿಲ್ಲದ ಆಯುರ್ವೇದ ವೈದ್ಯ ಪದ್ಧತಿಯಲ್ಲಿ ಉತ್ತಮ
ಕೋಳೂರು: ಸರ್ಕಾರಿ ಆಯುರ್ವೇದ ಚಿಕಿತ್ಸಾಲಯದ ನೂತನ ಕಟ್ಟಡ ಉದ್ಘಾಟನೆ


ಕೋಳೂರು: ಸರ್ಕಾರಿ ಆಯುರ್ವೇದ ಚಿಕಿತ್ಸಾಲಯದ ನೂತನ ಕಟ್ಟಡ ಉದ್ಘಾಟನೆ


ಬಳ್ಳಾರಿ, 31 ಮೇ (ಹಿ.ಸ.) :

ಆ್ಯಂಕರ್ : ಕುರುಗೋಡು ತಾಲ್ಲೂಕಿನ ಕೋಳೂರು ಗ್ರಾಮದಲ್ಲಿ ನೂತನ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯವನ್ನು ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಅವರು ಶನಿವಾರ ಉದ್ಘಾಟಿಸಿದ್ದಾರೆ.

ನಂತರ ಮಾತನಾಡಿದ ಅವರು, ಯಾವುದೇ ಅಡ್ಡ ಪರಿಣಾಮಗಳಿಲ್ಲದ ಆಯುರ್ವೇದ ವೈದ್ಯ ಪದ್ಧತಿಯಲ್ಲಿ ಉತ್ತಮವಾದ ಚಿಕಿತ್ಸೆ ಉಚಿತವಾಗಿ ಲಭ್ಯವಿದ್ದು, ಆಯುರ್ವೇದ ಚಿಕಿತ್ಸಾಲಯದ ಸೇವೆಗಳನ್ನು ಸಮರ್ಪಕವಾಗಿ ಸಾರ್ವಜನಿಕರು ಉಪಯೋಗಿಸಿಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕೋಳೂರು ಗ್ರಾಮ ಪಂಚಾಯತಿ ಅಧ್ಯಕ್ಷರಾದ ದೊಡ್ಡಬಸಮ್ಮ, ಉಪಾಧ್ಯಕ್ಷ ಚೆನ್ನಪ್ಪ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಎಂ.ವಿರುಪಾಕ್ಷ, ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ.ಕೆ.ಪಿ.ಕಲ್ಯಾಣಿ ಸೇರಿದಂತೆ ಕೋಳೂರು ಗ್ರಾಮ ಪಂಚಾಯತಿಯ ಸರ್ವ ಸದಸ್ಯರು, ಗ್ರಾಮದ ಮುಖಂಡರು, ಸಾರ್ವಜನಿಕರು ಮತ್ತು ಚಿಕಿತ್ಸಾಲಯದ ಸಿಬ್ಬಂದಿ ವರ್ಗ ಇದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande