ತಮಿಳು ಚಲನಚಿತ್ರ ನಟ ಕಮಲಹಾಸನ್ ಹೇಳಿಕೆ ಖಂಡಿಸಿ ಕರವೇಯಿಂದ ಪ್ರತಿಭಟನೆ
ತಮಿಳು ಚಲನಚಿತ್ರ ನಟ ಕಮಲಹಾಸನ್ ಹೇಳಿಕೆ ಖಂಡಿಸಿ ಕರವೇಯಿಂದ ಪ್ರತಿಭಟನೆ
ತಮಿಳು ಚಲನಚಿತ್ರನಟ ಕಮಲಹಾಸನ್ ಕನ್ನಡದ ಬಗ್ಗೆ ನೀಡಿರುವ ಹೇಳಿಕೆಯನ್ನು ವಿರೋಧಿಸಿ ಕೋಲಾರದಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.


ಕೋಲಾರ, ೩೧ ಮೇ (ಹಿ.ಸ) :

ಆ್ಯಂಕರ್ : ಕನ್ನಡ ಭಾಷೆ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಚಿತ್ರನಟ ಕಮಲ ಹಾಸನ್ ಅವರ ಹೇಳಿಕೆಯನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು, ನಗರದ ಬಸ್ ನಿಲ್ದಾಣದ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ವೇದಿಕೆಯ ಜಿಲ್ಲಾಧ್ಯಕ್ಷ ಮೇಡಿಹಾಳ ರಾವೇಂದ್ರ ಮಾತನಾಡಿ, ನಟ ಕಮಲ ಹಾಸನ್ ಕನ್ನಡಿಗರ ಭಾವನೆಗಳಿಗೆ ಧಕ್ಕೆ ತರುವಂತೆ, ತಮಿಳು ಭಾಷೆಯಿಂದ ಕನ್ನಡ ಭಾಷೆಯ ಉಗಮವಾಯಿತು ಎಂಬ ತಪ್ಪು ಹೇಳಿಕೆ ನೀಡಿದ್ದಾರೆ. ಇದು ದುರುದ್ದೇಶಪೂರಿತ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮೊದಲು ಚಿತ್ರರಂಗಲ್ಲಿ ನಟನಾಗಿ ಈಗ ರಾಜಕಾರಣಿಯಾದ ಮಾತ್ರಕ್ಕೆ ಹೇಳಿಕೆ ನೀಡಿರುವುದು ಸರಿಯಲ್ಲಿ. ವೇದಿಕೆಗಳಲ್ಲಿ ಮಾತನಾಡುವಾಗ ಜವಾಬ್ದಾರಿಯುತವಾಗಿ ಹೇಳಿಕೆ ನೀಡಬೇಕು. ಭಾಷೆಯನ್ನು ಗುರಿಯಾಗಿಸಿಕೊಂಡು ಮಾತನಾಡಿದರೆ ಸುಮ್ಮನಿರಲು ಸಾಧ್ಯವಿಲ್ಲ ಎಂದು ಕಿಡಿಕಾರಿದರು.

ಕನ್ನಡ ಭಾಷೆಯು ಶ್ರೀಮಂತವಾಗಿದ್ದು, ಸುಮಾರು ವರ್ಷಗಳ ಇತಿಹಾಸ ಹೊಂದಿದೆ. ಸಂಸತಿ ಮತ್ತು ಸ್ವಾಭಿಮಾನಕ್ಕೆ ತೀವ್ರ ಆಘಾತವನ್ನುಂಟು ಮಾಡಿದೆ. ಸುಳ್ಳು ಮತ್ತು ಆಧಾರರಹಿತ ಹೇಳಿಕೆ ನೀಡಿರುವುದಕ್ಕೆ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.

ಕಮಲಹಾಸನ್ ನಟಿಸಿರುವ ಹೊಸ ಚಿತ್ರ ತಗ್‌ಲೈಫ್ ಬುಡುಗಡೆಗೆ ದಿನಾಂಕ ನಿಗಧಿಯಾಗಿದೆ. ರಾಜ್ಯದಲ್ಲಿ ಬಿಡುಗಡೆಯಾಗದಂತೆ ತಡೆಯುವ ನಿರ್ಧಾರವನ್ನು ಕರವೇ ಕೈಗೊಂಡಿದೆ. ಈ ಚಿತ್ರದ ವಿತರಕರು ತಮ್ಮ ಹೂಡಿಕೆಯನ್ನು ರಕ್ಷಿಸಿಕೊಳ್ಳಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಕರ್ನಾಟಕದಲ್ಲಿ ಈ ಚಿತ್ರದ ಬಿಡುಗಡೆಗೆ ಯಾವುದೇ ರೀತಿ ಸಹಕಾರ ನೀಡಬಾರದು ಎಂದು ಕೋರಿದರು.

ಸರ್ಕಾರ ಮತ್ತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ಕಮಲಹಾಸನ್ ಅಭಿನಯದ ಥಗ್‌ಲೈಫ್ ಸಿನಿಮಾ ಬಿಡುಗಡೆಗೆ ಕರ್ನಾಟಕದಲ್ಲಿ ಅವಕಾಶ ನೀಡಬಾರದು. ಕನ್ನಡ ಭಾಷೆಯ ಸ್ವಾಭಿಮಾನವನ್ನು ಮತ್ತು ಹಿರಿಮೆಯನ್ನು ಕಾಪಾಡುವ ಹೋರಾಟ ಇದಾಗಿದ್ದು, ಇನ್ನು ಮುಂದೆ ಇಂತಹ ಪ್ರಕರಣಗಳು ಮುಂದುವರೆಯದAತೆ ಎಚ್ಚರವಹಿಸಬೇಕು ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ವೇದಿಕೆಯ ಪದಾಧಿಕಾರಿಗಾಳದ ವಿ.ಮುನಿರಾಜು, ತಾಲೂಕು ಅಧ್ಯಕ್ಷರಾದ ಮಾಲೂರು ಎಂ.ಶ್ರೀನಾವಾಸ, ಕೋಲಾರ ಶಶಿಕುಮಾರ, ಬಂಗಾರಪೇಟೆ ರಾಮಪ್ರಸಾದ್, ಮಹಬೂಬ್, ಮಂಜುನಾಥ, ಶೆಂಕರ್‌ರೆಡ್ಡಿ, ಡಿ.ವಿ.ಮಂಜುನಾಥ, ಹುಸೇನ್, ಕೋದಂಡರಾಮಯ್ಯ, ಗಣೇಶ್, ಲೋಕೇಶ್, ಕೆ.ನವೀನ್, ಸಂತೋಷ್, ರಾಮಕೃಷ್ಣಪ್ಪ, ನವೀನ್, ರಂಜಿತ್ ಭಾಗವಹಿಸಿದ್ದರು.

ಚಿತ್ರ : ತಮಿಳು ಚಲನಚಿತ್ರನಟ ಕಮಲಹಾಸನ್ ಕನ್ನಡದ ಬಗ್ಗೆ ನೀಡಿರುವ ಹೇಳಿಕೆಯನ್ನು ವಿರೋಧಿಸಿ ಕೋಲಾರದಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande