ಬಳ್ಳಾರಿ, 31 ಮೇ (ಹಿ.ಸ.) :
ಆ್ಯಂಕರ್ : ಸಾರ್ವಜನಿಕರು ತಂಬಾಕು ಉತ್ಪನ್ನಗಳ ಬಳಕೆಯಿಂದ ದೂರವಿರಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಹೇಳಿದ್ದಾರೆ
ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿ ಮುಂಭಾಗದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲಾ ಸರ್ವೇಕ್ಷಣಾಧಿಕಾರಿ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಕಾರ್ಯಕ್ರಮ ಅಧಿಕಾರಿಗಳಾದ ಡಾ.ಮರಿಯಂಬಿ ವಿ.ಕೆ ಅವರು ಮಾತನಾಡಿ, ತಂಬಾಕು ಉತ್ಪನ್ನಗಳ ಬಳಕೆ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರವು ಈಗಾಗಲೇ ಕಟ್ಟುನಿಟ್ಟಿನ ಕ್ರಮ ವಹಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವನೆಗೆ ರೂ.200 ರಿಂದ ರೂ.1000 ರವರೆಗೆ ದಂಡ ವಿಧಿಸಲು ಕಟ್ಟುನಿಟ್ಟಿನ ಸೂಚನೆ ಹೊರಡಿಸಿದ್ದು, ಸರ್ಕಾರದ ನಿಯಮಗಳನ್ನು ಪಾಲಿಸುವ ಮೂಲಕ ಬಳ್ಳಾರಿ ಜಿಲ್ಲೆಯನ್ನು ತಂಬಾಕು ಮುಕ್ತ ಜಿಲ್ಲೆಯನ್ನಾಗಿ ಮಾಡಲು ಕೈಜೋಡಿಸಬೇಕು ಎಂದು ಕರೆ ನೀಡಿದರು.
ಇದೇ ವೇಳೆ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ್ ದಾಸಪ್ಪನವರ ಅವರು ಪ್ರತಿಜ್ಞಾವಿಧಿ ಭೋದಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಇಂದ್ರಾಣಿ, ವೈದ್ಯಾಧಿಕಾರಿಗಳಾದ ಡಾ.ಜಬೀನ್ ತಾಜ್, ಡಾ.ಶ್ರಾವಣಿ, ಅಧಿಕಾರಿಗಳಾದ ರಾಘವೇಂದ್ರ, ಗೋವಿಂದಪ್ಪ, ವಿರುಪಾಕ್ಷಿ, ಅಂಬದಾಸ್, ಶಿವಕುಮಾರ್, ತಿಪ್ಪೇಸ್ವಾಮಿ, ಖಾಸಿಂ, ಉಮಾ ಮಹೇಶ್ವರಿ, ಸವಿತಾ, ಶರತ್ ಬಾಬು, ಶಾಂತಮ್ಮ, ಸಿಂಧು, ನವೀನ್, ಅಜಯ್, ವೀರಭದ್ರ, ನೇತ್ರಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿಯ ಸಿಬ್ಬಂದಿ ಹಾಗೂ ಜಿಲ್ಲಾ ಸರ್ವೇಕ್ಷಣಾಧಿಕಾರಿ ಕಚೇರಿಯ ಸಿಬ್ಬಂದಿ, ಮಾನಸಿಕ ಆರೋಗ್ಯ ಕಾರ್ಯಕ್ರಮದ ಸಿಬ್ಬಂದಿ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಿಬ್ಬಂದಿ ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್