ಬೆಂಗಳೂರು, 31 ಮೇ (ಹಿ.ಸ.) :
ಆ್ಯಂಕರ್ : ಕರ್ನಾಟಕ ರಾಜ್ಯದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ರೂಪಿಸಲಾಗಿರುವ ಸಿಎಸ್ಆರ್ ಅನುದಾನದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳ ನಿರ್ಮಾಣ ಯೋಜನೆಗೆ ನೋಡಲ್ ಅಧಿಕಾರಿಗಳನ್ನು ಸರ್ಕಾರ ನೇಮಿಸಿದೆ.
ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆ ತರಲು ಇದು ನನ್ನ ಕನಸಿನ ಯೋಜನೆ. ಈ ಯೋಜನೆಯನ್ನು ತ್ವರಿತವಾಗಿ ಕಾರ್ಯಗತಗೊಳಿಸಿ ನಮ್ಮ ಮಕ್ಕಳಿಗೆ ಉತ್ತಮ ಭವಿಷ್ಯ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa