ಕೋಲ್ಕತ್ತಾ, 01 ಜೂನ್ (ಹಿ.ಸ.) :
ಆ್ಯಂಕರ್ : ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ತಡರಾತ್ರಿ ಕೋಲ್ಕತ್ತಾ ತಲುಪಿದ್ದು, ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಭವ್ಯ ಸ್ವಾಗತ ಕೋರಲಾಯಿತು.
ಇಂದು ಅಮಿತ್ ಶಾ ಸಿಎಫ್‌ಎಸ್‌ಎಲ್ ನ ಹೊಸ ಕಟ್ಟಡವನ್ನು ಉದ್ಘಾಟಿಸಿ, ನಂತರ ನೇತಾಜಿ ಒಳಾಂಗಣ ಕ್ರೀಡಾಂಗಣದಲ್ಲಿ ಮಹತ್ವದ ಸಂಘಟನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಭೆಯಲ್ಲಿ ಬಿಜೆಪಿ ಸಂಸದರು, ಶಾಸಕರು, ಜಿಲ್ಲಾ ಉಸ್ತುವಾರಿಗಳು ಮೊದಲಾದವರು ಭಾಗವಹಿಸಲಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಗೆ ರಣತಂತ್ರ ರೂಪಿಸಲು ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ತಿಳಿದು ಬಂದಿದೆ.
ಸಭೆಯ ಬಳಿಕ ಶಾ ಸ್ವಾಮಿ ವಿವೇಕಾನಂದರ ಜನ್ಮಸ್ಥಳದಲ್ಲಿ ನಡೆಯುವ ಧಾರ್ಮಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa