ದಾವಣಗೆರೆ, 01 ಜೂನ್ (ಹಿ.ಸ.) :
ಆ್ಯಂಕರ್ : ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ದಾವಣಗೆರೆ ತಾಲ್ಲೂಕು ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸರ್ಕಾರಿ ಪರಿಶಿಷ್ಟ ವರ್ಗದ ಮೆಟ್ರಿಕ್ ಪೂರ್ವ, ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಆನ್‍ಲೈನ್ shp.karnataka.gov.in ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜೂನ್ 28 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ದೂ.ಸಂ: 08192-262002 ಸಂಪರ್ಕಿಸಬೇಕೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa