ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ತರಬೇತಿಗಾಗಿ ಅರ್ಜಿ ಆಹ್ವಾನ
ಧಾರವಾಡ, 1 ಜೂನ್ (ಹಿ.ಸ.): ಆ್ಯಂಕರ್:ಧಾರವಾಡ ಜಿಲ್ಲೆಯಲ್ಲಿ 2025-26 ನೇ ಸಾಲಿನಲ್ಲಿ ಯು.ಪಿ.ಎಸ್.ಸಿ ನಾಗರಿಕ ಸೇವೆ ಮತ್ತು ಬ್ಯಾಂಕಿಂಗ್ ಪಿ.ಒ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಉಚಿತ ಪರೀಕ್ಷಾ ಪೂರ್ವ ತರಬೇತಿ ನೀಡುತ್ತಿದ್ದು, ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1
ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ತರಬೇತಿಗಾಗಿ ಅರ್ಜಿ ಆಹ್ವಾನ


ಧಾರವಾಡ, 1 ಜೂನ್ (ಹಿ.ಸ.):

ಆ್ಯಂಕರ್:ಧಾರವಾಡ ಜಿಲ್ಲೆಯಲ್ಲಿ 2025-26 ನೇ ಸಾಲಿನಲ್ಲಿ ಯು.ಪಿ.ಎಸ್.ಸಿ ನಾಗರಿಕ ಸೇವೆ ಮತ್ತು ಬ್ಯಾಂಕಿಂಗ್ ಪಿ.ಒ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಉಚಿತ ಪರೀಕ್ಷಾ ಪೂರ್ವ ತರಬೇತಿ ನೀಡುತ್ತಿದ್ದು, ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಜೂನ್ 15, 2025 ರೋಳಗಾಗಿ https://bcwd.karnataka.gov.in ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 8050370006 ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪನಿದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande