ಗದಗ ಜಿಲ್ಲೆಯ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕ-ಬಾಲಕಿಯರ ಗಮನಕ್ಕೆ
ಗದಗ, 01 ಜೂನ್ (ಹಿ.ಸ.) : ಆ್ಯಂಕರ್ : 2025-26ನೇ ಸಾಲಿನಲ್ಲಿ ಗದಗ ಜಿಲ್ಲೆಯ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಸತಿ ನಿಲಯಗಳಾದ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ, ಎಸ್.ಎಮ್. ಕೃಷ್ಣಾ ನಗರ,ಗದಗ; ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯ, ಕಳಸಾಪುರ ರೋಡ್
ಪೋಟೋ


ಗದಗ, 01 ಜೂನ್ (ಹಿ.ಸ.) :

ಆ್ಯಂಕರ್ : 2025-26ನೇ ಸಾಲಿನಲ್ಲಿ ಗದಗ ಜಿಲ್ಲೆಯ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಸತಿ ನಿಲಯಗಳಾದ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ, ಎಸ್.ಎಮ್. ಕೃಷ್ಣಾ ನಗರ,ಗದಗ; ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯ, ಕಳಸಾಪುರ ರೋಡ್ , ಗದಗ; ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ, ಎಸ್.ಎಮ್. ಕೃಷ್ಣಾ ನಗರ, ಗದಗ-2, ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯ, ಕಳಸಾಪುರ ರೋಡ್, ಗದಗ-2, ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕರ ವಸತಿ ನಿಲಯ, ಬದಾಮಿ ರೋಡ ರೋಣ; ಅಲ್ಪಸಂಖ್ಯಾತರ ಮೆಟ್ರಿಕ್ ನಂತ ಬಾಲಕಿಯರ ವಸತಿ ನಿಲಯ, ಪಿ.ಯು. ಕಾಲೇಜು ಎದುರುಗಡೆ, ಕೊಪ್ಪಳ ರೋಡ, ಮುಂಡರಗಿ, ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ, ಕುಷ್ಟಗಿ ರೋಡ, ಗಜೇಂದ್ರಗಡ; ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ, ಹೊಸಮನಿ ಬಿಲ್ಡಿಂಗ್, ಗಜೇಂದ್ರಗಡ, ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ, ಹೊಸಮನಿ ಬಿಲ್ಡಿಂಗ್, ನರಗುಂದ, ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ, ದೇಸಾಯಿ ಬಣ, ಬಾಳಿಗೇರಿ ಓಣಿ, ಲಕ್ಷ್ಮೇಶ್ವರ ಈ ವಸತಿ ನಿಲಯಗಳಲ್ಲಿ ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮೋ ಹಾಗೂ ಪ್ರಥಮ ವರ್ಷದ ಪದವಿ ಮಟ್ಟದ ಕೋರ್ಸುಗಳಿಗೆ ಪ್ರವೇಶಾತಿಗಾಗಿ ಎಸ್‌ಎಚ್‌ಪಿ (ಸ್ಟೇಟ್ ಹಾಸ್ಟೆಲ್ ಪೋರ್ಟಲ್) ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಪೋಷಕರು/ವಿದ್ಯಾರ್ಥಿಗಳು ವೆಬ್‌ಸೈಟ್ ವಿಳಾಸ ಮೂಲಕ ಜೂನ್ 28 ರೊಳಗಾಗಿ ಆನ್‌ಲೈನ್ ಅರ್ಜಿಗಳನ್ನು ಸಲ್ಲಿಸಿ ಅರ್ಜಿ ಪ್ರತಿ ಹಾಗೂ ಎಲ್ಲಾ ದಾಖಲೆಗಳನ್ನು ಸಂಬಂಧಿಸಿದ ವಸತಿ ನಿಲಯಗಳಿಗೆ ನೀಡಬೇಕು.

ಹೆಚ್ಚಿನ ಮಾಹಿತಿಗಾಗಿ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಹಾಗೂ ಹತ್ತಿರದ ವಸತಿ ನಿಲಯಗಳಿಗೆ ಭೇಟಿ ನೀಡಿ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Lalita MP


 rajesh pande