ಧಾರವಾಡ, 1 ಜೂನ್ (ಹಿ.ಸ.):
ಆ್ಯಂಕರ್:
ಧಾರವಾಡ ಜಿಲ್ಲೆಯ 2024-25 ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ., ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ 8ನೇ ಮತ್ತು 10ನೇ ತರಗತಿ ಉತ್ತೀರ್ಣರಾದ 20 ರಿಂದ 45 ವರ್ಷದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ ಆತಿಥ್ಯ ಕ್ಷೇತ್ರದ ವಿವಿಧ ವಿಭಾಗದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಧಾರವಾಡ ಪ್ರವಾಸೋದ್ಯಮ ಇಲಾಖೆಯ ಕಛೇರಿಯಿಂದ ಅರ್ಜಿ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ದಾಖಲೆಗಳೊಂದಿಗೆ ಜೂನ್ 12, 2025 ರೊಳಗಾಗಿ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿಗೆ ದ್ವಿಪ್ರತಿಯಲ್ಲಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ಸಂಖ್ಯೆ:0836-2955522 ಗೆ ಸಂಪರ್ಕಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa