ಗದಗ, 01 ಜೂನ್ (ಹಿ.ಸ.) :
ಆ್ಯಂಕರ್ : ಮೈಸೂರು ವಿಶ್ವ ವಿದ್ಯಾನಿಲಯಕ್ಕೆ ಸಂಯೋಜನೆಗೊಂಡಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯ ಕಲಾ ಕಾಲೇಜು ( ಕಾವಾ), ಸಿದ್ಧಾರ್ಥ ನಗರ, ಮೈಸೂರು ಸಂಸ್ಥೆಯಲ್ಲಿ ಬ್ಯಾಚುಲರ್ ಆಫ್ ವಿಜ್ಯುವಲ್ ಆರ್ಟ್ಸ 2025-26ನೇ ಶೈಕ್ಷಣಿಕ ಸಾಲಿಗೆ ಪ್ರಥಮ ಬಿ.ವಿ.ಎ ಪದವಿ ಪ್ರವೇಶಾತಿಗಾಗಿ ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಜೂನ್ 10 ರವರೆಗೆ ಅರ್ಜಿ ಆಹ್ವಾನಿಸಲಾಗಿದೆ.
ಪದವಿಯಲ್ಲಿ 3ನೇ ಸೆಮಿಸ್ಟರ್ ನಿಂದ ಚಿತ್ರ ಕಲೆ, ಶಿಲ್ಪಕಲೆ, ಗ್ರಾಫಿಕ್ಸ್ ಕಲೆ ( ಅಚ್ಚುಕಲೆ ) , ಕಲಾ ಇತಿಹಾಸ ಹಾಗೂ ಛಾಯಾ ಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋದ್ಯಮ ವಿಭಾಗಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕ ಪದವಿಯಾಗಿರುತ್ತದೆ. ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸರ್ಕಾರದ ಅಂತರ್ಜಾಲ ವಿಳಾಸದ ಮೂಲಕವೇ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪ್ರವೇಶಾತಿಗಾಗಿ ಅರ್ಹತಾ ಪರೀಕ್ಷೆಯ ದಿನಾಂಕ ಮತ್ತು ಇತರೆ ಮಾಹಿತಿಯನ್ನು ತಿಳಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಈ ಕಾರ್ಯಾಲಯದ ಸಹಾಯವಾಣಿಗೆ ಕಚೇರಿ ಸಮಯದಲ್ಲಿ 0821-2438931 ನಂಬರಗೆ ಸಂಪರ್ಕಿಸಬಹುದು.
ಹಿಂದೂಸ್ತಾನ್ ಸಮಾಚಾರ್ / Lalita MP