ಕರಾವಳಿಯಲ್ಲಿ ಸಂಘರ್ಷಕ್ಕೆ ಕಾಂಗ್ರೆಸ್ ಕಾರಣ:ಬಿಜೆಪಿ
ಬೆಂಗಳೂರು, 1 ಜೂನ್ (ಹಿ.ಸ.): ಆ್ಯಂಕರ್: ಕರಾವಳಿ ಜಿಲ್ಲೆಯಲ್ಲಿ ಹಿಂದೂ ಕಾರ್ಯಕರ್ತರ ಸರಣಿ ಕೊಲೆಗಳು ನಡೆದಾಗ ಮೌನವಾಗಿದ್ದ ಕಾಂಗ್ರೆಸ್ ಈಗ ಎಚ್ಚೆತ್ತುಕೊಂಡಿದೆ. ಕರಾವಳಿಯಲ್ಲಿ ನಡೆಯುವ ಎಲ್ಲಾ ಸಂಘರ್ಷಗಳಿಗೆ ಕಾಂಗ್ರೆಸ್ ಪ್ರಚೋದನೆಯೇ ಕಾರಣ‌ ಎಂದು ರಾಜ್ಯ ಬಿಜೆಪಿ ಘಟಕ ಆರೋಪಿಸಿದೆ. ಸಾಮಾಜಿಕ ಮಾಧ್ಯಮದಲ್
ಕರಾವಳಿಯಲ್ಲಿ ಸಂಘರ್ಷಕ್ಕೆ ಕಾಂಗ್ರೆಸ್ ಕಾರಣ:ಬಿಜೆಪಿ


ಬೆಂಗಳೂರು, 1 ಜೂನ್ (ಹಿ.ಸ.):

ಆ್ಯಂಕರ್:

ಕರಾವಳಿ ಜಿಲ್ಲೆಯಲ್ಲಿ ಹಿಂದೂ ಕಾರ್ಯಕರ್ತರ ಸರಣಿ ಕೊಲೆಗಳು ನಡೆದಾಗ ಮೌನವಾಗಿದ್ದ ಕಾಂಗ್ರೆಸ್ ಈಗ ಎಚ್ಚೆತ್ತುಕೊಂಡಿದೆ. ಕರಾವಳಿಯಲ್ಲಿ ನಡೆಯುವ ಎಲ್ಲಾ ಸಂಘರ್ಷಗಳಿಗೆ ಕಾಂಗ್ರೆಸ್ ಪ್ರಚೋದನೆಯೇ ಕಾರಣ‌ ಎಂದು ರಾಜ್ಯ ಬಿಜೆಪಿ ಘಟಕ ಆರೋಪಿಸಿದೆ.

ಸಾಮಾಜಿಕ ಮಾಧ್ಯಮದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ದ ಹರಿಹಾಯ್ದಿರುವ ಬಿಜೆಪಿ ಮಾನ್ಯ ಡಿ.ಕೆ.ಶಿವಕುಮಾರ್ ಅವರೇ, ಹುಬ್ಬಳ್ಳಿ ಪೊಲೀಸ್ ಠಾಣೆ ಮೇಲೆ ದಾಳಿ, ಡಿ.ಜೆ. ಹಳ್ಳಿ, ಕೆ.ಜಿ. ಹಳ್ಳಿ ದಾಳಿ ನಡೆಸಿದ ಮತಾಂಧರ ಕೇಸು ವಾಪಸ್ಸು ಪಡೆದು ಮತಾಂಧರಿಗೆ ಕಾನೂನಿನ ಭಯ ಇಲ್ಲದ ಹಾಗೆ ಮಾಡಿದ್ದು ನೀವೇ ಅಲ್ವಾ?

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಕಾರ್ಯಕರ್ತರ ಸರಣಿ ಕೊಲೆಗಳು ನಡೆಯುತ್ತಿದೆ‌. ಆ ಪ್ರದೇಶದಲ್ಲಿ ನಿಷೇಧಿತ ಪಿಎಫ್‌ಐ ಭಯೋತ್ಪಾದನಾ ಸಂಘಟನೆ ಭಯದ ವಾತಾವರಣ ಸೃಷ್ಟಿಸುತ್ತಿದೆ. ರಾಜ್ಯ ಸರ್ಕಾರ ಅವರನ್ನು ಹತ್ತಿಕ್ಕುವ ಬದಲು ಪೋಷಿಸುವ ಕೆಲಸ ಮಾಡುತ್ತಿದೆ. ಮುಸ್ಲಿಂ ಮತ ಬ್ಯಾಂಕ್‌ಗಾಗಿ ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸುತ್ತಿದೆ.

ಬೆಂಗಳೂರಿನ ಬಳಿಕ ಅತಿ ಹೆಚ್ಚು ತೆರಿಗೆ ಪಾವತಿಸುವ ಜಿಲ್ಲೆ ಕರಾವಳಿಯ ಅವಳಿ ಜಿಲ್ಲೆಗಳು. ಶೈಕ್ಷಣಿಕವಾಗಿ ಹಾಗೂ ಅರ್ಥಿಕವಾಗಿ ಮುಂದುವರಿದಿದ್ದು, ಅಲ್ಲಿನ ಮತದಾರರು ಕಾಂಗ್ರೆಸ್ ಪಕ್ಷದ ತುಷ್ಟೀಕರಣ ರಾಜಕೀಯದ ವಿರುದ್ಧ ದೃಢವಾಗಿ ನಿಂತ ಕಾರಣಕ್ಕಾಗಿ ಕಾಂಗ್ರೆಸ್ ಸರ್ಕಾರ ಮುಸ್ಲಿಮರ ಓಲೈಕೆ ನಡೆಸಿ ಕರಾವಳಿಯ ಶಾಂತಿಯನ್ನು ಹಾಳುಗೆಡವುತ್ತಿದೆ‌. ಕಾಂಗ್ರೆಸ್ ಪಕ್ಷದ ವೋಟ್ ಬ್ಯಾಂಕ್ ರಾಜಕೀಯದಿಂದ ಕರಾವಳಿಯ ನೆಮ್ಮದಿ ಹಾಳಾಗಿದೆ ಎಂದು‌ ಆರೋಪಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande