ಜೂನ್ 5 ರಂದು ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ
ಧಾರವಾಡ, 1 ಜೂನ್ (ಹಿ.ಸ.): ಆ್ಯಂಕರ್: ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕಾರ್ಯ ವಿಧಾನಗಳು ಹಾಗೂ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಬಗ್ಗೆ ಧಾರವಾಡ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆಯನ್ನು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಾಧಿಕಾರದ ಅಧ್ಯಕ್ಷ ಎಸ್. ಆರ್. ಪಾಟೀಲ ಅ
ಜೂನ್ 5 ರಂದು ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ


ಧಾರವಾಡ, 1 ಜೂನ್ (ಹಿ.ಸ.):

ಆ್ಯಂಕರ್:

ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕಾರ್ಯ ವಿಧಾನಗಳು ಹಾಗೂ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಬಗ್ಗೆ ಧಾರವಾಡ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆಯನ್ನು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಾಧಿಕಾರದ ಅಧ್ಯಕ್ಷ ಎಸ್. ಆರ್. ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಜೂನ್ 5, 2025 ರಂದು ಬೆಳಿಗ್ಗೆ 10:30 ಗಂಟೆಗೆ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಗ್ಯಾರಂಟಿ ಯೋಜನೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಪ್ರಗತಿ ಪರಿಶೀಲನಾ ಸಭೆಗೆ ತಮ್ಮ ಇಲಾಖೆಯ ಪ್ರಗತಿ ವರದಿ ಮತ್ತು ಅನುಪಾಲನಾ ವರದಿಯೊಂದಿಗೆ ಹಾಜರಾಗಲು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande