ದಾವಣಗೆರೆ, 1 ಜೂನ್ (ಹಿ.ಸ.):
ಆ್ಯಂಕರ್:
ದಾವಣಗೆರೆ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ 02 ವರ್ಷಗಳ ಐ.ಟಿ.ಐ, ದ್ವಿತೀಯ ಪಿಯುಸಿ(ವಿಜ್ಞಾನ), ದ್ವಿತಿಯ ಪಿ.ಯು.ಸಿ (ತಾಂತ್ರಿಕ ವಿಷಯಗಳಲ್ಲಿ) ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಗೆ ಸರ್ಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್‍ಗಳಲ್ಲಿ ಲ್ಯಾಟರಲ್ ಎಂಟ್ರಿ ಮುಖಾಂತರ 2ನೇ ವರ್ಷ, 3ನೇ ಸೆಮಿಸ್ಟರ್ ಡಿಪ್ಲೊಮಾ ಕೋರ್ಸುಗಳಿಗೆ ಆಫ್-ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಜೂನ್ 14 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರಾರು, ಸರ್ಕಾರಿ ಡಿ.ಆರ್.ಆರ್ ಪಾಲಿಟೆಕ್ನಿಕ್‍ನ್ನು ಸಂಪರ್ಕಿಸಲು ತಿಳಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa