ಪಶ್ಚಿಮ ಘಟ್ಟದ ಸಾಮರ್ಥ್ಯ ಅಧ್ಯಯನ ನಡೆಸಲು ಖಂಡ್ರೆ ಸೂಚನೆ
ಬೆಂಗಳೂರು, 1 ಜೂನ್ (ಹಿ.ಸ.): ಆ್ಯಂಕರ್:ದಕ್ಷಿಣ ಕನ್ನಡ, ಕೊಡಗು ಮೊದಲಾದ ಭಾಗದಲ್ಲಿ ಮುಂಗಾರು ಪೂರ್ವ ಮಳೆಗೇ ಭೂಕುಸಿತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ ಧಾರಣ ಸಾಮರ್ಥ್ಯ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಅರಣ್ಯ, ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ಇಲಾಖೆಯ ಅಪರ ಮು
ಪಶ್ಚಿಮ ಘಟ್ಟದ ಸಾಮರ್ಥ್ಯ ಅಧ್ಯಯನ ನಡೆಸಲು ಖಂಡ್ರೆ ಸೂಚನೆ


ಬೆಂಗಳೂರು, 1 ಜೂನ್ (ಹಿ.ಸ.):

ಆ್ಯಂಕರ್:ದಕ್ಷಿಣ ಕನ್ನಡ, ಕೊಡಗು ಮೊದಲಾದ ಭಾಗದಲ್ಲಿ ಮುಂಗಾರು ಪೂರ್ವ ಮಳೆಗೇ ಭೂಕುಸಿತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ ಧಾರಣ ಸಾಮರ್ಥ್ಯ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಅರಣ್ಯ, ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.

ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಲಿಖಿತ ಸೂಚನೆ ನೀಡಿರುವ ಅವರು, ಪಶ್ಚಿಮ ಘಟ್ಟದಲ್ಲಿ ಹಲವು ರಸ್ತೆ, ಮತ್ತಿತರ ಯೋಜನೆಗಳು ಕಾರ್ಯಗತವಾಗುತ್ತಿದ್ದು, ಇದರಿಂದ ಘಟ್ಟ ಅಪಾಯಕ್ಕೆ ಸಿಲುಕಿದೆ. ಆಸ್ತಿ ಹಾನಿ, ಬೆಳೆ ಹಾನಿ, ಜೀವಿಹಾನಿಯ ಜೊತೆಗೆ ವನ್ಯ ಜೀವಿಗಳೂ ಸಹ ಸಂಕಷ್ಟ ಎದುರಿಸುವಂತಾಗಿದೆ ಎಂದು ತಜ್ಞರು ಆತಂಕ ವ್ಯಕ್ತಪಡಿಸಿರುವುದಾಗಿ ತಿಳಿಸಿದ್ದಾರೆ.

ಪಶ್ಚಿಮಘಟ್ಟ ಕ್ಷೀಣಿಸಿದರೆ ಮುಂಬರುವ ದಿನಮಾನಗಳಲ್ಲಿ ತೀವ್ರ ಜಲಕ್ಷಾಮ ಎದುರಾಗುವ ಭೀತಿ ಇದೆ ಎಂಬ ತಜ್ಞರ ಅಭಿಪ್ರಾಯ ಉಲ್ಲೇಖಿಸಿರುವ ಸಚಿವರು, ಈ ನಿಟ್ಟಿನಲ್ಲಿ ಅಧ್ಯಯನ ಮಾಡಿ 3 ತಿಂಗಳೊಳಗೆ ಪಶ್ಚಿಮಘಟ್ಟದ ತಾಳಿಕೊಳ್ಳುವ ಸಾಮರ್ಥ್ಯದ ಬಗ್ಗೆ ವರದಿ ಸಲ್ಲಿಸಲು ಜೀವವೈವಿಧ್ಯ ಮಂಡಳಿಯ ಸದಸ್ಯ ಕಾರ್ಯದರ್ಶಿ, ಮೌಲ್ಯಮಾಪನ, ಕಾರ್ಯಯೋಜನೆ, ಸಂಶೋಧನೆ ಮತ್ತು ತರಬೇತಿ ಹಾಗೂ ಅರಣ್ಯ ಸಂರಕ್ಷಣೆ ವಿಭಾಗದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೂ ಸೂಚಿಸಿದ್ದಾರೆ

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande