ಸಿರಗುಪ್ಪ, 01 ಜೂನ್ (ಹಿ.ಸ.) :
ಆ್ಯಂಕರ್ : 33 ಕೆ.ವಿ ಹಚ್ಚೋಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂನ್ 3 ಮತ್ತು 4 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಜೆಸ್ಕಾಂನ ಅಧಿಕಾರಿ ತಿಳಿಸಿದ್ದಾರೆ.
ಜೆಸ್ಕಾಂನ ಸಿರುಗುಪ್ಪಾ ಕಾರ್ಯ ಮತ್ತು ಪಾಲನಾ ಉಪವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರು, 33/11 ಕೆ.ವಿ ಹಚ್ಚೋಳ್ಳಿ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಹಚ್ಚೋಳ್ಳಿ, ಕುಡದರಹಾಳ್, ಬೀರಳ್ಳಿ, ರಾವಿಹಾಳ್ ಗ್ರಾಮಪಂಚಾಯಿತಿಗಳಿಗೆ ಒಳಪಡುವ ವಿವಿಧ ಗ್ರಾಮಗಳಲ್ಲಿ ಮತ್ತು ಎಂಟರ್ಪ್ರೈಸಸ್ ಸ್ಥಾವರಕ್ಕೆ ವಿದ್ಯುತ್ ಪೂರೈಕೆಯಲ್ಲಿ ಅಡಚನೆಯಾಗಲಿದ್ದು, ಸಾರ್ವಜನಿಕರು ಜೆಸ್ಕಾಂನೊಂದಿಗೆ ಸಹಕರಿಸಬೇಕು ಎಂದು ಕೋರಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್