ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಹೆಚ್ಚುವರಿ ಆಯ್ಕೆ ಪಟ್ಟಿ ಪ್ರಕಟ
ಕೊಪ್ಪಳ, 10 ಜೂನ್ (ಹಿ.ಸ.) : ಆ್ಯಂಕರ್ : ಕೊಪ್ಪಳ ಜಿಲ್ಲೆಯಲ್ಲಿನ ಕಲ್ಯಾಣ ಕರ್ನಾಟಕ ಸ್ಥಳೀಯ ವೃಂದದಲ್ಲಿ ಖಾಲಿ ಇರುವ 05 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಹೆಚ್ಚುವರಿ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ನೇರನೇಮಕಾತಿ ಮೂಲಕ ಭರ್ತಿ ಮಾಡುವ ಸಲುವಾಗಿ ರೋಸ್ಟರ
ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಹೆಚ್ಚುವರಿ ಆಯ್ಕೆ ಪಟ್ಟಿ ಪ್ರಕಟ


ಕೊಪ್ಪಳ, 10 ಜೂನ್ (ಹಿ.ಸ.) :

ಆ್ಯಂಕರ್ : ಕೊಪ್ಪಳ ಜಿಲ್ಲೆಯಲ್ಲಿನ ಕಲ್ಯಾಣ ಕರ್ನಾಟಕ ಸ್ಥಳೀಯ ವೃಂದದಲ್ಲಿ ಖಾಲಿ ಇರುವ 05 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಹೆಚ್ಚುವರಿ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ನೇರನೇಮಕಾತಿ ಮೂಲಕ ಭರ್ತಿ ಮಾಡುವ ಸಲುವಾಗಿ ರೋಸ್ಟರ್ ಕಮ್ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳ ಹೆಚ್ಚುವರಿ ಆಯ್ಕೆ ಪಟ್ಟಿಯನ್ನು ತಯಾರಿಸಿ ಕೊಪ್ಪಳ ಜಿಲ್ಲಾ ವೆಬ್‍ಸೈಟ್ ನಲ್ಲಿ ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ಪರಿಶೀಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವೆಬ್‍ಸೈಟ್‍ನ್ನು ವೀಕ್ಷಿಸಬಹುದು ಎಂದು ಕೊಪ್ಪಳ ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande