ಉಪ್ಪಾರ ಅಭಿವೃದ್ಧಿ ನಿಗಮದಿಂದ ಸಾಲ-ಸೌಲಭ್ಯಕ್ಕೆ ಅರ್ಜಿ ಆಹ್ವಾನ
ರಾಯಚೂರು, 10 ಜೂನ್ (ಹಿ.ಸ.) : ಆ್ಯಂಕರ್ : ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸಹಾಯಧನ ಹಾಗೂ ಸಾಲ-ಸೌಲಭ್ಯಕ್ಕೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಯೋಜನೆಗಳು: ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದಿಂದ ಸ್ವಯಂ ಉದ್ಯೋಗ
ಉಪ್ಪಾರ ಅಭಿವೃದ್ಧಿ ನಿಗಮದಿಂದ ಸಾಲ-ಸೌಲಭ್ಯಕ್ಕೆ ಅರ್ಜಿ ಆಹ್ವಾನ


ರಾಯಚೂರು, 10 ಜೂನ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸಹಾಯಧನ ಹಾಗೂ ಸಾಲ-ಸೌಲಭ್ಯಕ್ಕೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಯೋಜನೆಗಳು: ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದಿಂದ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ (ಬ್ಯಾಂಕ್‍ಗಳ ಸಹಯೋಗದೊಂದಿಗೆ), ಅರಿವು ಶೈಕ್ಷಣಿಕ ಸಾಲ ಯೋಜನೆ(ನೂತನ), ಅರಿವು ಶೈಕ್ಷಣಿಕ ಸಾಲ ಯೋಜನೆ (ನವೀಕರಣ), ವಿದೇಶಿ ವ್ಯಾಸಂಗ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಾತಂತ್ರ ಅಮೃತ ಮುನ್ನಡೆ ಯೋಜನೆಗಳಡಿ ಸಹಾಯಧನ ಮತ್ತು ಸಾಲ-ಸೌಲಭ್ಯ ನೀಡಲಾಗುವುದು.

ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ ನಲ್ಲಿರುವಂತೆ ಅರ್ಜಿದಾರರ ಹೆಸರು, (ಶ್ರೀ/ಶ್ರೀಮತಿ ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದು ಹೊಂದಾಣಿಕೆಯಾಗಬೇಕು.

ವಿಶೇಷ ಸೂಚನೆ: ನಿಗಮದ ಸೌಲಭ್ಯಕ್ಕಾಗಿ 2023-24 ಮತ್ತು 2024-25ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಅರ್ಜಿದಾರರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಉಳಿದ ಯೋಜನೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತರು ಬೆಂಗಳೂರು ಒನ್, ಕರ್ನಾಟಕ ಒನ್, ಅಟಲ್‍ಜೀ ಜನಸ್ನೇಹಿ ಕೇಂದ್ರ ಮತ್ತು ನಾಗರಿಕ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಸೇವಾಸಿಂಧು ಪೊರ್ಟಲ್ ವಿಳಾಸ: http://sevasindhu.karnataka.gov.in ನಲ್ಲಿ ಜುಲೈ 03 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಯನ್ನು ನಿಗಮದ ವೆಬ್‍ಸೈಟ್ http://upparadevelopment.karnataka.gov.in ಅಥವಾ ನಿಗಮದ ಕೇಂದ್ರ ಕಚೇರಿ ದೂರವಾಣಿ ಸಂಖ್ಯೆ: 080-22252555 ಹಾಗೂ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ, ನಂ: 1-1-158, ಉದಯನಗರ, ಕರ್ನಾಟಕ ಗ್ರಾಮೀಣ ಬ್ಯಾಂಕ ಹಿಂಭಾಗ, ಉಮಾ ಹೋಟೆಲ್ ಹತ್ತಿರ, ಸ್ಟೇಷನ ರೋಡ್, ರಾಯಚೂರು ದೂರವಾಣಿ ಸಂಖ್ಯೆ: 08532-250440ಗೆ ಕಚೇರಿಯ ವೇಳೆಯಲ್ಲಿ ಸಂಪರ್ಕ ಮಾಡಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande