ಆರೋಗ್ಯ ಇಲಾಖೆಯಲ್ಲಿ ಇನ್‍ಸೆಕ್ಟ್ ಕಲೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ
ಹೊಸಪೇಟೆ, 10 ಜೂನ್ (ಹಿ.ಸ.) : ಆ್ಯಂಕರ್ : ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಪ್ರಸ್ತುತ ಖಾಲಿಯಿರುವ ಒಂದು ಇನ್‍ಸೆಕ್ಟ್ ಕಲೆಕ್ಟರ್ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಅಹ್ವಾನಿಸಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಿಜ್ಞಾನ ವಿ
ಆರೋಗ್ಯ ಇಲಾಖೆಯಲ್ಲಿ ಇನ್‍ಸೆಕ್ಟ್ ಕಲೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ


ಹೊಸಪೇಟೆ, 10 ಜೂನ್ (ಹಿ.ಸ.) :

ಆ್ಯಂಕರ್ : ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಪ್ರಸ್ತುತ ಖಾಲಿಯಿರುವ ಒಂದು ಇನ್‍ಸೆಕ್ಟ್ ಕಲೆಕ್ಟರ್ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಅಹ್ವಾನಿಸಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಿಜ್ಞಾನ ವಿಭಾಗದಲ್ಲಿ ಪಿಯುಸಿ, 12ನೇ ತರಗತಿ ವಿದ್ಯಾರ್ಹತೆ ಹೊಂದಿರಬೇಕು. 40 ವರ್ಷ ಮೀರಿರಬಾರದು. ಕಲ್ಯಾಣ ಕರ್ನಾಟಕದ ನಿವಾಸಿಯಾಗಿದ್ದು, ಸಾಮಾನ್ಯ ಅಭ್ಯರ್ಥಿ ಮೀಸಲಾತಿ ನೀಡಲಾಗಿದೆ. ಮಾಸಿಕ ವೇತನ ರೂ.15,114 ಹಾಗೂ ಎನ್‍ಹೆಚ್‍ಎಂ ನಿಯಮಾವಳಿ ಪ್ರಕಾರ ಕ್ಷೇತ್ರ ಭೇಟಿಗಾಗಿ ದಿನಭತ್ಯೆ, ಪ್ರಯಾಣ ಭತ್ಯೆ ಪಾವತಿಸಲಾಗುವುದು.

ಅರ್ಜಿಯನ್ನು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿಗಳ ಕಚೇರಿ, 60 ಹಾಸಿಗೆ ಆಸ್ಪತ್ರೆ ಹಿಂಭಾಗ, ಮಸೀದಿ ಹತ್ತಿರ, ಹೊಸಪೇಟೆಯಲ್ಲಿ ಜೂ.9 ರಿಂದ ಜೂ.20 ರವರೆಗೆ ಕಚೇರಿ ಸಮಯದಲ್ಲಿ (ರಜಾದಿನಗಳನ್ನು ಹೊರತುಪಡಿಸಿ) ಪಡೆಯಬಹುದಾಗಿದೆ. ಹುದ್ದೆಯ ನೇಮಕಾತಿಗೆ ಸಂಬಂಧಿಸಿದ ಪೂರ್ಣ ಪ್ರಮಾಣದ ಹಕ್ಕನ್ನು ಜಿಲ್ಲಾ ಆಯ್ಕೆ ಸಮಿತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘವು ಕಾಯ್ದಿರಿಸಿಕೊಂಡಿದೆ. ಆಯ್ಕೆಯನ್ನು ಮೆರಿಟ್ ಕಮ್ ರೋಸ್ಟರ್ ಆಧಾರದ ಮೇಲೆ ನೇಮಕಾತಿ ಮಾಡಲಾಗುವುದು ಎಂದು ಜಿಲ್ಲಾ ವಿಬಿಡಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande