ಉಚಿತ ಸಾಧನ ಸಲಕರಣೆಗಳ ವಿತರಣೆ
ಬಳ್ಳಾರಿ, 10 ಜೂನ್ (ಹಿ.ಸ.) : ಆ್ಯಂಕರ್ : ದಿವ್ಯಾಂಗಜನರು ಶ್ರೇಷ್ಠರು ಮತ್ತು ದೇವರ ಮಕ್ಕಳಿದ್ದಂತೆ. ಅವರಿಗೆ ಗೌರವ ಮತ್ತು ಪ್ರೋತ್ಸಾಹ ನೀಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಕೆ.ಇ.ಚಿದಾನಂದಪ್ಪ ಅವರು ಹೇಳಿದ್ದಾರೆ. ಕೇಂ
ಉಚಿತ ಸಾಧನ ಸಲಕರಣೆಗಳ ವಿತರಣೆ


ಉಚಿತ ಸಾಧನ ಸಲಕರಣೆಗಳ ವಿತರಣೆ


ಬಳ್ಳಾರಿ, 10 ಜೂನ್ (ಹಿ.ಸ.) :

ಆ್ಯಂಕರ್ : ದಿವ್ಯಾಂಗಜನರು ಶ್ರೇಷ್ಠರು ಮತ್ತು ದೇವರ ಮಕ್ಕಳಿದ್ದಂತೆ. ಅವರಿಗೆ ಗೌರವ ಮತ್ತು ಪ್ರೋತ್ಸಾಹ ನೀಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಕೆ.ಇ.ಚಿದಾನಂದಪ್ಪ ಅವರು ಹೇಳಿದ್ದಾರೆ.

ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಮತ್ತು ಜಿಲ್ಲಾಡಳಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ಸಬಲೀಕರಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಕೇಂದ್ರದ ವಿಶೇಷ ಅಡಿಪ್ ಯೋಜನೆಯಡಿ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಮಂಗಳವಾರ ಏರ್ಪಡಿಸಿದ್ದ ವಿಶೇಷಚೇತನರಿಗೆ ಉಚಿತವಾಗಿ ಸಾಧನ ಸಲಕರಣೆಗಳ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪುಟ್ಟರಾಜ ಗವಾಯಿ ಮತ್ತು ಅವರ ಗುರು ಪಂಚಾಕ್ಷಾರಿ ಗವಾಯಿಗಳು ಅಂಗವಿಕಲತೆಯನ್ನು ಮೆಟ್ಟಿ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಸಾಧನೆಗಳನ್ನು ಪ್ರೇರಣೆಯಾಗಿ ಪರಿಗಣಿಸಬೇಕು. ಇದಕ್ಕೆ ವಿಶೇಷಚೇತನರು ಮುಖ್ಯವಾಗಿ ಹಿಂಜರಿಕೆ ಮತ್ತು ಕೀಳರಿಮೆ ಬೀಡಬೇಕು. ತಮ್ಮಲ್ಲಿನ ವಿಶೇಷ ಪ್ರತಿಭೆಗಳಿಂದ ತಮ್ಮ ಸಾಮಥ್ರ್ಯ ಅರಿತು ಸಮಾಜದಲ್ಲಿ ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಸಮಾಜದಲ್ಲಿ ವಿಶೇಷಚೇತನರನ್ನು ಕಡೆಗಣಿಸಬಾರದು. ಸಾಮಾಜ್ಯ ಜನರಿಗೆ ಏನಾದರೂ ನೀಡಿದರೆ ಅದು ಸಹಾಯ. ವಿಶೇಷಚೇತನರಿಗೆ ನೀಡಿದರೆ ಅದು ಸೇವೆಯಾಗುತ್ತದೆ. ಅಂತಹ ಸೇವೆಯನ್ನು ಸರ್ಕಾರಗಳು ಮಾಡುತ್ತಿವೆ ಎಂದು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ್ ಕುಮಾರ್ ಕೆ.ಹೆಚ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿಶೇಷಚೇತನರು ತಮ್ಮ ಜೀವನವನ್ನು ಸ್ಪೂರ್ತಿಯಾಗಿ ಸ್ವೀಕರಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಕಲ್ಯಾಣಾಧಿಕಾರಿ ಗೋವಿಂದಪ್ಪ ಹೆಚ್.ಎಂ., ಶಿಕ್ಷಣ ಇಲಾಖೆಯ ಅಧಿಕಾರಿ ಮೆಹಬೂಬ್, ಮಹಾನಗರ ಪಾಲಿಕೆಯ ವಲಯ 02 ರ ಅಧಿಕಾರಿ ಗುರುರಾಜ, ಅಲಿಂಕೋ ಸಂಸ್ಥೆಯ ಮುಖ್ಯಸ್ಥ ಆದರ್ಶ ಸಿಂಗ್, ಸ್ಮೈಲ್ ಸಂಸ್ಥೆಯ ಮುಖ್ಯಸ್ಥ ಪ್ರಭುರಾಜ, ಅನುಗ್ರಹ ಸಂಸ್ಥೆ ಮತ್ತು ಸಮರ್ಥನ್ ಸಂಸ್ಥೆಯ ಮುಖ್ಯಸ್ಥರು ಸೇರಿದಂತೆ ವಿಕಲಚೇತನರು ಮತ್ತು ಹಿರಿಯ ನಾಗರಿಕರಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಪದಾಧಿಕಾರಿಗಳು, ವಿಶೇಷಚೇತನರು ಹಾಗೂ ಮತ್ತೀತರರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande