ಜೂನ್ 13 ರಂದು ಉದ್ಯೋಗ ಮೇಳ
ರಾಯಚೂರು, 10 ಜೂನ್ (ಹಿ.ಸ.) : ಆ್ಯಂಕರ್ : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆಯಿಂದ ನಗರದ ಥಾಮಸ್ ಪದವಿ ಮಹಾವಿದ್ಯಾಲಯದಲ್ಲಿ ಜೂನ್ 13ರ ಬೆಳಿಗ್ಗೆ 10 ರಿಂದ ಸಂಜೆ 4ಗಂಟೆವರೆಗೆ ಉದ್ಯೋಗ ಮೇಳ ಆಯೋಜನೆ ಮಾಡಿಲಾಗಿದ್ದು, ಆಸಕ್ತ ಯುವಕ ಅಥವಾ ಯುವತಿಯರು ಭಾಗಹಿಸಬಹುದಾಗಿದೆ ಎಂದು ಜಿಲ್ಲಾ ಉದ್ಯ
ಜೂನ್ 13 ರಂದು ಉದ್ಯೋಗ ಮೇಳ


ರಾಯಚೂರು, 10 ಜೂನ್ (ಹಿ.ಸ.) :

ಆ್ಯಂಕರ್ : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆಯಿಂದ ನಗರದ ಥಾಮಸ್ ಪದವಿ ಮಹಾವಿದ್ಯಾಲಯದಲ್ಲಿ ಜೂನ್ 13ರ ಬೆಳಿಗ್ಗೆ 10 ರಿಂದ ಸಂಜೆ 4ಗಂಟೆವರೆಗೆ ಉದ್ಯೋಗ ಮೇಳ ಆಯೋಜನೆ ಮಾಡಿಲಾಗಿದ್ದು, ಆಸಕ್ತ ಯುವಕ ಅಥವಾ ಯುವತಿಯರು ಭಾಗಹಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.

ಉದ್ಯೋಗ ಮೇಳದಲ್ಲಿ ಆನೇಕ ಖಾಸಗಿ ಸಂಸ್ಥೆಗಳು ಭಾಗಿಯಾಗುತ್ತಿದ್ದು, ತಮ್ಮ ಕಂಪನಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇರವಾಗಿ ಭರ್ತಿ ಮಾಡಿಕೊಳ್ಳಲಿದ್ದಾರೆ.

18 ರಿಂದ 30 ವರ್ಷಗಳವರೆಗಿನ ಎಸ್.ಎಸ್.ಎಲ್.ಸಿ, ಪಿ.ಯು.ಸಿ ಹಾಗೂ ಎಲ್ಲಾ ಪದವೀಧರ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. ವಿದ್ಯಾರ್ಹತೆಯ ಅಂಕ ಪಟ್ಟಿಗಳ ಜೆರಾಕ್ಸ್ ಪ್ರತಿಗಳು ಮತ್ತು ಬಯೋಡಾಟಾ, ಆಧಾರ್ ಕಾರ್ಡ್ ಪ್ರತಿ ಹಾಗೂ ಭಾವಚಿತ್ರಗಳೊಂದಿಗೆ ಆಗಮಿಸಬೇಕು.

ನೇರ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕವಿರುವುದಿಲ್ಲ, ಬದಲಾಗಿ ತಮ್ಮ ಸ್ವಂತ ಖರ್ಚಿನಲ್ಲಿ ಈ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ; 08532-231684, 9008211750, 8095125775 ಅಥವಾ 9886367517ಗೆ ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ನವೀನ ಕುಮಾರ್ ಸಂಗೇಪಾಗ್ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande