ಕೊಪ್ಪಳ ವಿವಿ ಪದವಿ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ
ಕೊಪ್ಪಳ, 10 ಜೂನ್ (ಹಿ.ಸ.) : ಆ್ಯಂಕರ್ : 2025-26ನೇ ಶೈಕ್ಷಣಿಕ ಸಾಲಿನ ಬಿ.ಎ., ಬಿ.ಕಾಂ., ಬಿ.ಕಾಂ (AEDP), ಬಿ.ಎಸ್ಸಿ, ಬಿ.ಬಿ.ಎ. ಮತ್ತು ಬಿ.ಸಿ.ಎ. ಕೋರ್ಸುಗಳಿಗೆ ಕೊಪ್ಪಳ ವಿಶ್ವವಿದ್ಯಾಲಯದ ಅಧೀನದಲ್ಲಿ ಬರುವ ಎಲ್ಲಾ ಸಂಯೋಜಿತ ಸರ್ಕಾರಿ, ಖಾಸಗಿ ಅನುದಾನಿತ ಮತ್ತು ಅನುದಾನೇತರ ಮಹಾವಿದ್ಯಾಲಯಗಳಲ್ಲ
ಕೊಪ್ಪಳ ವಿವಿ ಪದವಿ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ


ಕೊಪ್ಪಳ, 10 ಜೂನ್ (ಹಿ.ಸ.) :

ಆ್ಯಂಕರ್ : 2025-26ನೇ ಶೈಕ್ಷಣಿಕ ಸಾಲಿನ ಬಿ.ಎ., ಬಿ.ಕಾಂ., ಬಿ.ಕಾಂ (AEDP), ಬಿ.ಎಸ್ಸಿ, ಬಿ.ಬಿ.ಎ. ಮತ್ತು ಬಿ.ಸಿ.ಎ. ಕೋರ್ಸುಗಳಿಗೆ ಕೊಪ್ಪಳ ವಿಶ್ವವಿದ್ಯಾಲಯದ ಅಧೀನದಲ್ಲಿ ಬರುವ ಎಲ್ಲಾ ಸಂಯೋಜಿತ ಸರ್ಕಾರಿ, ಖಾಸಗಿ ಅನುದಾನಿತ ಮತ್ತು ಅನುದಾನೇತರ ಮಹಾವಿದ್ಯಾಲಯಗಳಲ್ಲಿ ಪ್ರಥಮ ವರ್ಷ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

UUCMS (https://uucms.karnataka.gov.in/) ತಂತ್ರಾಂಶದ ಮುಖಾಂತರ ಆಗಸ್ಟ್ 31 ರವರೆಗೆ ಅರ್ಜಿಗಳನ್ನು ಸಲ್ಲಿಸಬಹುದು. ಎಲ್ಲಾ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡೆಸಿಕೊಂಡು ನಿಗದಿತ ದಿನಾಂಕದ ಒಳಗೆ ಪ್ರವೇಶಾತಿಯನ್ನು ಪಡೆದುಕೊಳ್ಳಬಹುದು. ಹೆಚ್ಚಿನ ವಿವರಗಳಿಗಾಗಿ ಕೊಪ್ಪಳ ವಿಶ್ವವಿದ್ಯಾಲಯದ ಜಾಲತಾಣವನ್ನು www.koppaluniversity.ac.in ಅನ್ನು ವೀಕ್ಷಿಸಬಹುದು ಎಂದು ವಿಶ್ವವಿದ್ಯಾಲಯದ ಕುಲಸಚಿವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande