ಕಾಲ್ತುಳಿತ ಪ್ರಕರಣ : ಜೂನ್ ೧೨ಕ್ಕೆ ವಿಚಾರಣೆ ಮುಂದೂಡಿಕೆ
ಬೆಂಗಳೂರು, 10 ಜೂನ್ (ಹಿ.ಸ.) : ಆ್ಯಂಕರ್ : ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇಂಡಿಯನ್ ಪ್ರೀಮಿಯರ್ ಲೀಗ್ ಗೆದ್ದ ಬಳಿಕ ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ವಿಜಯೋತ್ಸವದ ವೇಳೆ ಕಾಲ್ತುಳಿತಕ್ಕೆ ಸಿಲುಕಿ 11 ಮಂದಿ ಸಾವನ್ನಪ್ಪಿ, ಹಲವರು ಗಾಯಗೊಂಡಿದ್ದರು. ಈ ಘಟನೆ ಸಂಬಂಧ ಉಚ್ಚ ನ್ಯಾಯಾಲಯ ದಾಖಲಿಸಿಕೊಂಡಿದ
Court


ಬೆಂಗಳೂರು, 10 ಜೂನ್ (ಹಿ.ಸ.) :

ಆ್ಯಂಕರ್ : ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇಂಡಿಯನ್ ಪ್ರೀಮಿಯರ್ ಲೀಗ್ ಗೆದ್ದ ಬಳಿಕ ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ವಿಜಯೋತ್ಸವದ ವೇಳೆ ಕಾಲ್ತುಳಿತಕ್ಕೆ ಸಿಲುಕಿ 11 ಮಂದಿ ಸಾವನ್ನಪ್ಪಿ, ಹಲವರು ಗಾಯಗೊಂಡಿದ್ದರು. ಈ ಘಟನೆ ಸಂಬಂಧ ಉಚ್ಚ ನ್ಯಾಯಾಲಯ ದಾಖಲಿಸಿಕೊಂಡಿದ್ದ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಇಂದು ನಡೆಯಿತು.

ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ. ಕಾಮೇಶ್ವರ ರಾವ್ ಮತ್ತು ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರಿದ್ದ ನ್ಯಾಯಪೀಠ ಮಂಗಳವಾರ ಕಲಾಪ ಪ್ರಾರಂಭಿಸುತ್ತಿದ್ದಂತೆ, ಮೃತರ ಪರವಾಗಿ ಸೇರಿ ಕೆಲವು ವಕೀಲರು ಮಧ್ಯಂತರ ಅರ್ಜಿ ವಿಚಾರಣೆಗೆ ಪರಿಗಣಿಸಬೇಕು ಎಂದು ಮನವಿ ಮಾಡಿದರು.

ಈ ವೇಳೆ ಹಾಜರಿದ್ದ ಅಡ್ವೋಕೇಟ್‌ ಜನರಲ್‌ ಶಶಿಕಿರಣ್‌ ಶೆಟ್ಟಿ ಅವರನ್ನು ಉದ್ದೇಶಿಸಿದ ಪೀಠ, ಈವರೆಗೂ ವಸ್ತುಸ್ಥಿತಿ ವರದಿಯನ್ನು ಏಕೆ ಸಲ್ಲಿಸಿಲ್ಲ ಎಂದು ಪ್ರಶ್ನಿಸಿತು. ಇದಕ್ಕೆ ಶೆಟ್ಟಿ ಅವರು, ಘಟನೆ ಸಂಬಂಧ ನ್ಯಾಯಾಂಗ ತನಿಖೆ, ಮ್ಯಾಜಿಸ್ಟ್ರೇಟ್​ ತನಿಖೆಗೆ ವಹಿಸಲಾಗಿದೆ. ತನಿಖಾ ವರದಿ ಬರಬೇಕಾಗಿದೆ. ವರದಿ ಬರುವುದಕ್ಕೂ ಮುನ್ನ ನ್ಯಾಯಾಲಯಕ್ಕೆ ಸಲ್ಲಿಸಿದಲ್ಲಿ ತನಿಖೆಗೂ ಮುನ್ನ ಸರ್ಕಾರ ತೀರ್ಮಾನ ಮಾಡಿದೆ ಎಂಬ ಆರೋಪ ಬರಲಿದೆ. ಆದ್ದರಿಂದ ಒಂದು ತಿಂಗಳ ಕಾಲಾವಕಾಶ ನೀಡಬೇಕು ಎಂದು ಕೋರಿದರು.

ಇದನ್ನ ಪರಿಗಣಿಸದ ಪೀಠ, ನಿಮ್ಮ ವರದಿಯನ್ನು ಮುಚ್ಚಿದ ಲೋಕಟೆಯಲ್ಲಿ ಎರಡು ದಿನದಲ್ಲಿ ಸಲ್ಲಿಸುವಂತೆ ಸೂಚನೆ ನೀಡಿತು. ಅಲ್ಲದೆ, ಸರ್ಕಾರ ಸಲ್ಲಿಸುವ ವರದಿಯನ್ನು ಪರಿಗಣಿಸಿ ಮಧ್ಯಂತರ ಅರ್ಜಿಗಳ ಕುರಿತಂತೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿ ವಿಚಾರಣೆಯನ್ನು ಜೂನ್‌ 12ರಂದು ಮಧ್ಯಾಹ್ನ ವಿಚಾರಣೆ ನಡೆಸುವುದಾಗಿ ತಿಳಿಸಿ ಮುಂದೂಡಿತು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande