ಸಿದ್ದರಾಮಯ್ಯಗೆ ವಿಜಯೇಂದ್ರ ಬಹಿರಂಗ ಪತ್ರ
ಬೆಂಗಳೂರು, 10 ಜೂನ್ (ಹಿ.ಸ.) : ಆ್ಯಂಕರ್ : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್ ಸಿಬಿ ತಂಡದ ಸಂಭ್ರಮಾಚರಣೆ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತದಿಂದ ೧೧ ಜನ ಸಾವಿಗೀಡಾದ ಘಟನೆಗೆ ಸಂಬಂಧಿಸಿದಂತೆ ಸರಕಾರದ ನಿರ್ಧಾರ ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮುಖ್ಯಮಂತ್ರಿ ಸಿದ್ದರಾಮಯ್
Letter


Letter


ಬೆಂಗಳೂರು, 10 ಜೂನ್ (ಹಿ.ಸ.) :

ಆ್ಯಂಕರ್ : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್ ಸಿಬಿ ತಂಡದ ಸಂಭ್ರಮಾಚರಣೆ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತದಿಂದ ೧೧ ಜನ ಸಾವಿಗೀಡಾದ ಘಟನೆಗೆ ಸಂಬಂಧಿಸಿದಂತೆ ಸರಕಾರದ ನಿರ್ಧಾರ ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ ಬರೆದಿದ್ದಾರೆ.

ಪತ್ರದ ಸಂಪೂರ್ಣ ಸಾರಾಂಶ ಇಲ್ಲಿದೆ.....

ಕಳೆದ ಜೂನ್ 4 ಕರ್ನಾಟಕದ ಇತಿಹಾಸದಲ್ಲಿ ಕರಾಳ ಅಧ್ಯಾಯದ ದಿನ. ಕ್ರಿಕೆಟ್ ಅಭಿಮಾನದ ಲಾಭ ಗಳಿಸುವ ಸ್ವಾರ್ಥದ ದುರಾಲೋಚನೆಯಿಂದ ಮುಖ್ಯಮಂತ್ರಿಗಳು ಮತ್ತು ಕಾಂಗ್ರೆಸ್ ಸರ್ಕಾರ ತೆಗೆದುಕೊಂಡ ಬೇಜವಾಬ್ದಾರಿ ಹಾಗೂ ಹೊಣೆಗೇಡಿತನದ ನಿರ್ಧಾರದಿಂದಾಗಿ ಅಮಾಯಕ ಯುವಜೀವಗಳು ಬಲಿಯಾಗಿವೆ, ಜಮಾವಣೆಗೊಂಡಿದ್ದ ಸಾವಿರಾರು ಜನರು ನೋವು-ಸಂಕಷ್ಟವನ್ನು ಅನುಭವಿಸಿದ್ದಾರೆ.

ಕುಟುಂಬ ಬೆಳಗಬೇಕಿದ್ದ, ಉಜ್ವಲ ಭವಿಷ್ಯದ ಕನಸು ಕಂಡಿದ್ದ 11 ಯುವ ಜನರ ಸಾವು ಆ ಕುಟುಂಬಗಳ ನೆಮ್ಮದಿಯನ್ನು ಕಿತ್ತುಕೊಂಡು ಹೆತ್ತವರು ನಿತ್ಯ ಕಣ್ಣೀರಿಡುವಂತಾಗಿದೆ. ಇಡೀ ಘಟನೆಯಿಂದಾಗಿ ಈ ಕ್ಷಣಕ್ಕೂ ಇಡೀ ರಾಜ್ಯ ಮಮ್ಮಲ ಮರುಗುತ್ತಿದೆ. ಸಾವಿಗೀಡಾದ ಹನ್ನೊಂದು ಜನರ ಪೈಕಿ ಮನೋಜ್ ಎಂಬ ಯುವಕನ ಸಾವಿನ ಸುದ್ದಿ ಅರಗಿಸಿಕೊಳ್ಳಲಾಗದ ಆತನ ಅಜ್ಜಿ ಆಹಾರ ತ್ಯಜಿಸಿ ಪ್ರಾಣ ಬಿಟ್ಟಿರುವ ಸುದ್ದಿ ನೋವು ತರಿಸಿದೆ. ದುರಂತದಲ್ಲಿ ಅಮೂಲ್ಯ ಜೀವಗಳನ್ನು ಕಳೆದುಕೊಂಡ ಕುಟುಂಬ ಯಾವ ಪರಿಯಲ್ಲಿ ರೋದಿಸುತ್ತಿದೆ ಎಂಬುದನ್ನು ಮೃತ ದೇವೀರಮ್ಮನವರ ಸಾವು ಸಾಕ್ಷೀಕರಿಸುತ್ತಿದೆ.

ರಾಷ್ಟ್ರ- ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರಿನ ಘಟನೆ ಕರ್ನಾಟಕದ ಘನತೆಗೆ ಕಪ್ಪು ಮಸಿ ಬಳಿದಿದೆ, ನಮ್ಮ ರಾಜ್ಯ ಅಸುರಕ್ಷತೆಯ ತಾಣ ಎಂಬ ಸಂದೇಶ ರವಾನೆಯಾಗಿದೆ. ಇಷ್ಟಾಗಿಯೂ ಸರ್ಕಾರಕ್ಕೂ ಈ ಘಟನೆಗೂ ಸಂಬಂಧವಿಲ್ಲ, ಸರ್ಕಾರ ಈ ಘಟನೆಯ ಜವಾಬ್ದಾರಿಯನ್ನು ಹೊರಲಾಗದು ಎಂಬ ಮುಖ್ಯಮಂತ್ರಿಗಳ ಹೇಳಿಕೆ ಪಲಾಯನವಾದ ಹಾಗೂ ನಿರ್ಲಜ್ಜತನದ ಹೊಣೆಗೇಡಿತನವನ್ನು ಪ್ರತಿಬಿಂಬಿಸುತ್ತಿದೆ. ಅಧಿಕಾರಕ್ಕೆ ಅಂಟಿಕೊಳ್ಳುವ ಭಂಡತನದ ನಡೆ ಪರಂಪರೆಯ ಕರ್ನಾಟಕದ ನೈತಿಕ ರಾಜಕಾರಣವನ್ನು ಅವಮಾನಿಸುತ್ತಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande