ಗದಗ, 10 ಜೂನ್ (ಹಿ.ಸ.) :
ಆ್ಯಂಕರ್ : ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ , ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿ (ರಿ) ಗದಗ , ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ , ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಗದಗ ಹಾಗೂ ವಿವಿಧ ಇಲಾಖೆಗಳ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನ ಕಾರ್ಯಕ್ರಮವನ್ನು ಜೂನ್ 12 ರಂದು ಬೆ 10.30 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ ದಲ್ಲಿ ಹಮ್ಮಿಕೊಳ್ಳಲಾಗಿದೆ.
ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್.ಶಿವನಗೌಡ್ರ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಬಾಲ ಕಾರ್ಮಿಕ ನಿರ್ಮೂಲನ ಯೋಜನಾ ಸೊಸೈಟಿ ಅಧ್ಯಕ್ಷರಾದ ಸಿ.ಎನ್.ಶ್ರೀಧರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್, ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಬಿ.ಎಸ್.ನೇಮಗೌಡ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ಶ್ರೀಮತಿ ಜಯದೇವಿ ಅಂದಪ್ಪ ಕವಲೂರು, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಆರ್.ಜಿ.ಕಲ್ಲೂರ, ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀಶೈಲ ಸೋಮನಕಟ್ಟಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಮಹೇಶ ಪೋತದಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಶ್ರೀಮತಿ ಪದ್ಮಾವತಿ ಜಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಆರ್.ಎಸ್.ಬುರಡಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಮೆಹಬೂಬ ತುಂಬರಮಟ್ಟಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಬಿ.ಮಸನಾಯಕ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ವಸಂತ ಮಡ್ಲೂರ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಶ್ರೀಮತಿ ರಫೀಕಾ ಹಳ್ಳೂರು ಆಗಮಿಸಲಿದ್ದಾರೆ.
ಕಾರ್ಮಿಕ ಇಲಾಖೆಯ 2ನೇ ವೃತ್ತ ಕಾರ್ಮಿಕ ನಿರೀಕ್ಷಕರಾದ ಉಮೇಶ ಎಸ್ ಹುಲ್ಲಣ್ಣವರ, 1ನೇ ವೃತ್ತ ಕಾರ್ಮಿಕ ನಿರೀಕ್ಷಕರಾದ ಕುಮಾರಿ ಸುಷ್ಮಾ, ಜಿಲ್ಲಾ ಬಾಲ ಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿ ಯೋಜನಾ ನಿರ್ದೇಶಕರಾದ ಸಂದೇಶ ಪಾಟೀಲ ಸರ್ವರಿಗೂ ಸ್ವಾಗತ ಕೋರಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Lalita MP