ಹೊಸಪೇಟೆ, 11 ಜೂನ್ (ಹಿ.ಸ.) :
ಆ್ಯಂಕರ್ : ಜಿಲ್ಲಾ ಮಟ್ಟದ ವಿಶ್ವ ರಕ್ತದಾನಿಗಳ ದಿನಾಚರಣೆಯನ್ನು ಜೂ.14 ರಂದು ನೂರು ಹಾಸಿಗೆ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ವೇದಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ವಿಶ್ವ ರಕ್ತ ದಿನಾಚರಣೆ ನಿಮಿತ್ತ ಜಾಗೃತಿ ಜಾಥವನ್ನು ಬೆಳಿಗ್ಗೆ 9 ಗಂಟೆಗೆ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಿಂದ, ಗಾಂಧಿ ಚೌಕ್, ಶಾನಭಾಗ ಸರ್ಕಲ್, ಅಂಬೇಡ್ಕರ್ ಸರ್ಕಲ್, ವಿಜಯನಗರ ಕಾಲೇಜಿನ ಮುಂಭಾಗದ ಮೂಲಕ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯವರೆಗೆ ಜಾಗೃತಿ ಜಾಥಾವನ್ನು ನಡೆಸಲಾಗುತ್ತದೆ ಎಂದು ಜಿಲ್ಲಾ ಕ್ಷಯರೋಗ ನಿರ್ಮೂಲನ ಅಧಿಕಾರಿಗಳಾದ ಡಾ.ಭಾಸ್ಕರ್ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್