ಚಿಕ್ಕಬಳ್ಳಾಪುರ, 11 ಜೂನ್ (ಹಿ.ಸ.) :
ಆ್ಯಂಕರ್ : ಮಹರ್ಷಿ ವಾಲ್ಮೀಕಿ ನಿಗಮದ ಹಣ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಬಳ್ಳಾರಿ ಕಾಂಗ್ರೆಸ್ ಸಂಸದ ಮತ್ತು ಶಾಸಕರ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ಮಾತನಾಡಿದ ಅವರು, ಇಡಿ ಯವರು ದಾಳಿ ಮಾಡಿದ್ದು ಯಾವುದೇ ಕಾನೂನಿನ ಉಲ್ಲಂಘನೆಯಾಗಿದ್ದರೆ ಅದಕ್ಕೆ ನಾವು ಬೆಂಬಲಿಸುವುದಿಲ್ಲ. ಕಾನೂನು ಪ್ರಕಾರವಾಗಿ ಕ್ರಮ ಕೈಗೊಳ್ಳಲಿ. ಕಾನೂನಿನ ಅನುಷ್ಠಾನಕ್ಕೆ ಅಡ್ಡಿಪಡಿಸುವುದಿಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa