ರಾಜ್ಯಪಾಲರನ್ನು ನಾನೇ ಆಹ್ವಾನಿಸಿದ್ದು : ಸಿದ್ದರಾಮಯ್ಯ
ಗೌರಿಬಿದನೂರು, 11 ಜೂನ್ (ಹಿ.ಸ.) : ಆ್ಯಂಕರ್ : ಬೆಂಗಳೂರಿನಲ್ಲಿ ವಿಧಾನ ಸೌಧದ ಮೆಟ್ಟಿಲುಗಳ ಮೇಲೆ ಅರ್ ಸಿಬಿ ಆಟಗಾರರ ಸನ್ಮಾನ ಕಾರ್ಯಕ್ರಮಕ್ಕೆ ರಾಜ್ಯಪಾಲರನ್ನು ನಾನೇ ಆಹ್ವಾನಿಸಿದ್ದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ಮಾಧ್ಯಮಗಳ
Cm


ಗೌರಿಬಿದನೂರು, 11 ಜೂನ್ (ಹಿ.ಸ.) :

ಆ್ಯಂಕರ್ : ಬೆಂಗಳೂರಿನಲ್ಲಿ ವಿಧಾನ ಸೌಧದ ಮೆಟ್ಟಿಲುಗಳ ಮೇಲೆ ಅರ್ ಸಿಬಿ ಆಟಗಾರರ ಸನ್ಮಾನ ಕಾರ್ಯಕ್ರಮಕ್ಕೆ ರಾಜ್ಯಪಾಲರನ್ನು ನಾನೇ ಆಹ್ವಾನಿಸಿದ್ದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, ರಾಜ್ಯಪಾಲರು ತಾವಾಗಿಯೇ ಕಾರ್ಯಕ್ರಮಕ್ಕೆ ಬರಲಿಲ್ಲ ಆಹ್ವಾನ ನೀಡಿದ್ದರಿಂದ ಬಂದಿದ್ದರು ಎಂದರು.

ಜೂನ್ 4 ರಂದು ಕರ್ನಾಟಕ ಕ್ರಿಕೆಟ್ ಸಂಸ್ಥೆ ಹಾಗೂ ಆರ್.ಸಿ. ಬಿ ಯ ವತಿಯಿಂದ ಆರ್.ಸಿ. ಬಿ ಆಟಗಾರರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ನನಗೆ ಅಂದು ಬೆಳಿಗ್ಗೆ 11.29 ನಿಮಿಷಕ್ಕೆ ಕೆ.ಎಸ್.ಸಿ.ಎ ವತಿಯಿಂದ ಶಂಕರ್ ಮತ್ತು ಜಯರಾಮ್ ಅವರು ಆಹ್ವಾನ ನೀಡಿ ಮನವಿ ಮಾಡಿಕೊಂಡರು.

ಇದಕ್ಕೆ ನಾನು ಒಪ್ಪಿಗೆ ನೀಡಿದೆ. ಬಳಿಕ ಅವರು ರಾಜ್ಯಪಾಲರನ್ನು ಆಹ್ವಾನ ಮಾಡಿರುವುದಾಗಿ ತಿಳಿಸಿದರು. ಪತ್ರಿಕೆಗಳಲ್ಲಿ ಹಾಗೂ ಮಾಧ್ಯಮಗಳಲ್ಲಿ ರಾಜ್ಯಪಾಲರು ಅವರಾಗಿಯೇ ಬಂದಿದ್ದರು ಎಂದು ಪ್ರಾಚಾರವಾಗಿದ್ದು ಅದು ತಪ್ಪು ಎಂದರು.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಆಗಿದ್ದ ಗೋವಿಂದರಾಜು ಅವರು ರಾಜ್ಯಪಾಲರಿಗೆ ಕರೆ ಮಾಡಿ ಫೋನ್ ನನಗೆ ಕೊಟ್ಟರು. ಆಗ ನಾನು ಕೂಡ ಕಾರ್ಯಕ್ರಮಕ್ಕೆ ತೆರಳುತ್ತಿದ್ದು ನೀವು ಬನ್ನಿ ಎಂದು ಆಹ್ವಾನಿಸಿದೆ ಎಂದರು.

ರಾಜ್ಯಪಾಲರು ಕೂಡ ಕಾರ್ಯಕ್ರಮಕ್ಕೆ ಆಗಮಿಸಿದರು. ಸನ್ಮಾನ ಕಾರ್ಯಕ್ರಮ 20 ನಿಮಿಷಗಳಲ್ಲಿ ಮುಗಿದುಹೋಯಿತು ಎಂದರು. ಮಾಧ್ಯಮಗಳು ಹಾಗೂ ಸುದ್ದಿ ವಾಹಿನಿಗಳಲ್ಲಿ ರಾಜ್ಯಪಾಲರು ತಾವಾಗಿಯೇ ಬಂದಿದ್ದಾರೆ ಎಂದು ವರದಿಯಾದ್ದರಿಂದ ಸ್ಪಷ್ಟೀಕರಣ ನೀಡುತ್ತಿದ್ದೇನೆ ಎಂದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande