ಗಂಗಾವತಿ : ಜೂ.17 ರಂದು ತಾಲ್ಲೂಕು ಮಟ್ಟದ ಕೆಡಿಪಿ ಸಭೆ
ಕೊಪ್ಪಳ, 11 ಜೂನ್ (ಹಿ.ಸ.) : ಆ್ಯಂಕರ್ : ಜೂನ್ 16 ರಂದು ನಿಗದಿಪಡಿಸಿದ್ದ ಕನಕಗಿರಿ, ಕಾರಟಗಿ ಮತ್ತು ಗಂಗಾವತಿ ತಾಲ್ಲೂಕುಗಳ 2025-26ನೇ ಸಾಲಿನ ತಾಲೂಕಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯನ್ನು ಕಾರಣಾಂತರಗಳಿಂದ ಮುಂದೂಡಿ ಜೂನ್ 17 ರಂದು ಬೆಳಿಗ್ಗೆ 10.30 ಗಂಟೆಗೆ ಗಂಗಾವತಿ ತಾಲ್ಲೂಕು ಪಂಚಾಯತಿಯ ಮಂಥನ
ಗಂಗಾವತಿ : ಜೂ.17 ರಂದು ತಾಲ್ಲೂಕು ಮಟ್ಟದ ಕೆಡಿಪಿ ಸಭೆ


ಕೊಪ್ಪಳ, 11 ಜೂನ್ (ಹಿ.ಸ.) :

ಆ್ಯಂಕರ್ : ಜೂನ್ 16 ರಂದು ನಿಗದಿಪಡಿಸಿದ್ದ ಕನಕಗಿರಿ, ಕಾರಟಗಿ ಮತ್ತು ಗಂಗಾವತಿ ತಾಲ್ಲೂಕುಗಳ 2025-26ನೇ ಸಾಲಿನ ತಾಲೂಕಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯನ್ನು ಕಾರಣಾಂತರಗಳಿಂದ ಮುಂದೂಡಿ ಜೂನ್ 17 ರಂದು ಬೆಳಿಗ್ಗೆ 10.30 ಗಂಟೆಗೆ ಗಂಗಾವತಿ ತಾಲ್ಲೂಕು ಪಂಚಾಯತಿಯ ಮಂಥನ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಸಭೆಯ ಅಧ್ಯಕ್ಷತೆಯನ್ನು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್.ತಂಗಡಗಿ ಅವರು ವಹಿಸಿಕೊಳ್ಳುವರು. ಆದ್ದರಿಂದ ತಾಲೂಕಾ ಮಟ್ಟದ ಎಲ್ಲಾ ಅನುಷ್ಠಾನಾಧಿಕಾರಿಗಳು ಏಪ್ರಿಲ್-2025 ರಿಂದ ಮೇ-2025 ರ ಅಂತ್ಯದವರೆಗೆ ಸಾಧಿಸಿದ ಪ್ರಗತಿ ವರದಿಯೊಂದಿಗೆ ಕಡ್ಡಾಯವಾಗಿ ಸಭೆಗೆ ಹಾಜರಾಗಬೇಕು ಎಂದು ಕಾರಟಗಿ ತಾಲ್ಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande