ಬಳ್ಳಾರಿ, 11 ಜೂನ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ಜಾನಪದ ಅಕಾಡೆಮಿಯು 2024 ನೇ ಸಾಲಿನಲ್ಲಿ 01-01-2024 ರಿಂದ 31-12-2024 ರ ವರೆಗೆ ಪ್ರಥಮ ಆವೃತ್ತಿಯಲ್ಲಿ ಮುದ್ರಣಗೊಂಡಿರುವ (ತಾಂತ್ರಿಕ ಹಾಗೂ ಪೂರ್ವಭಾವಿ ಪುಟಗಳನ್ನು ಹೊರತುಪಡಿಸಿ) ಕನಿಷ್ಠ 150 ಪುಟಗಳಿಗೂ ಮೇಲ್ಪಟ್ಟಿರುವಂತೆ, ನಾಲ್ಕು ಪ್ರಕಾರಗಳ ಅತ್ಯುತ್ತಮ ಜಾನಪದ ಕೃತಿಗಳಿಗೆ ಬಹುಮಾನ ನೀಡುವ ಯೋಜನೆಯಡಿ ಜಾನಪದ ಕೃತಿಗಳನ್ನು ಪುಸ್ತಕ ಬಹುಮಾನಕ್ಕಾಗಿ ಆಹ್ವಾನಿಸಿದೆ.
ಲೇಖಕರು, ಪ್ರಕಾಶಕರು, ಸಂಪಾದಕರು ತಮ್ಮ 1 ಕೃತಿಯನ್ನು ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, 2ನೇ ಮಹಡಿ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002 ಇವರಿಗೆ ಜೂನ್ 30 ರೊಳಗೆ ತಲುಪುವಂತೆ ಖುದ್ದಾಗಿ, ಕೊರಿಯರ್ ಅಥವಾ ಅಂಚೆ ಮೂಲಕ ಕಳುಹಿಸಿಕೊಡಬಹುದು.
ಈ ಪುಸ್ತಕವು ತಜ್ಞರಿಂದ ಪ್ರಕಾರವಾರು ಆಯ್ಕೆಯಾದಲ್ಲಿ ನಂತರ ಪುಸ್ತಕ ಬಹುಮಾನಕ್ಕೆ ಲೇಖಕರಿಂದ ಉಳಿದಂತೆ 03 ಪ್ರತಿಗಳನ್ನು ಮೌಲ್ಯಮಾಪಕರ ಪರಿಶೀಲನೆಗೆ ತರಿಸಿಕೊಳ್ಳಲಾಗುವುದು.
ವಿವಿಧ ಪ್ರಕಾರಗಳ ವಿವರ:
ಜನಪದ ಗದ್ಯ, ಜನಪದ ಪದ್ಯ, ಜನಪದ ವಿಚಾರ-ವಿಮರ್ಶೆ- ಸಂಶೋಧನೆ ಮತ್ತು ಜನಪದ ಸಂಕೀರ್ಣ.
ಈಗಾಗಲೇ ಪುಸ್ತಕ ಬಹುಮಾನ ಪಡೆದ ಸಂಪಾದಕರು, ಲೇಖಕರು ಪುನಃ ಪುಸ್ತಕ ಬಹುಮಾನ ಯೋಜನೆಗೆ ಕೃತಿಗಳನ್ನು ಕಳುಹಿಸಬಾರದಾಗಿ ಕೋರಿದೆ.
ಹೆಚ್ಚಿನ ಮಾಹಿತಿಗಾಗಿ ಬೆಂಗಳೂರಿನ ಜೆ.ಸಿ ರಸ್ತೆಯ ಕನ್ನಡ ಭವನದ 2 ನೇ ಮಹಡಿಯ ಕರ್ನಾಟಕ ಜಾನಪದ ಅಕಾಡೆಮಿ ಕಚೇರಿ ಅಥವಾ ದೂ.080- 22215509 ಗೆ ಸಂಪರ್ಕಿಸಬಹುದು ಎಂದು ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್