ರಾಯಚೂರು : ಲೋಕಾಯುಕ್ತ ಪೊಲೀಸ್ ಅಧೀಕ್ಷಕರಿಂದ ಅಹವಾಲು ಸ್ವೀಕಾರ
ಕೊಪ್ಪಳ, 11 ಜೂನ್ (ಹಿ.ಸ.) : ಆ್ಯಂಕರ್ : ರಾಯಚೂರು ಲೋಕಾಯುಕ್ತ ಪೆÇಲೀಸ್ ಅಧೀಕ್ಷಕರ ಅಧ್ಯಕ್ಷತೆಯಲ್ಲಿ ಕೊಪ್ಪಳ ತಾಲ್ಲೂಕು ಕೇಂದ್ರದಲ್ಲಿ ಸಾರ್ವಜನಿಕ ಕುಂದುಕೊರತೆ ಅಹವಾಲು ಸ್ವೀಕರಿಸಲು ಜೂನ್ 13 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಕೊಪ್ಪಳ ತಾಲ್ಲೂಕ ಪಂಚಾಯತ ಸಭಾಂಗಣದಲ್ಲಿ ಅಹವಾಲ
ರಾಯಚೂರು : ಲೋಕಾಯುಕ್ತ ಪೊಲೀಸ್ ಅಧೀಕ್ಷಕರಿಂದ ಅಹವಾಲು ಸ್ವೀಕಾರ


ಕೊಪ್ಪಳ, 11 ಜೂನ್ (ಹಿ.ಸ.) :

ಆ್ಯಂಕರ್ : ರಾಯಚೂರು ಲೋಕಾಯುಕ್ತ ಪೆÇಲೀಸ್ ಅಧೀಕ್ಷಕರ ಅಧ್ಯಕ್ಷತೆಯಲ್ಲಿ ಕೊಪ್ಪಳ ತಾಲ್ಲೂಕು ಕೇಂದ್ರದಲ್ಲಿ ಸಾರ್ವಜನಿಕ ಕುಂದುಕೊರತೆ ಅಹವಾಲು ಸ್ವೀಕರಿಸಲು ಜೂನ್ 13 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಕೊಪ್ಪಳ ತಾಲ್ಲೂಕ ಪಂಚಾಯತ ಸಭಾಂಗಣದಲ್ಲಿ ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಈ ಸಭೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಎಲ್ಲಾ ಇಲಾಖೆಯ ತಾಲ್ಲೂಕ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಕೊಪ್ಪಳ ತಾಲ್ಲೂಕು ವ್ಯಾಪ್ತಿಯ ಸಾರ್ವಜನಿಕರಲ್ಲಿ ಯಾರಿಗಾದರೂ ಸರ್ಕಾರಿ ಅಧಿಕಾರಿಗಳಿಂದ ತಮಗೆ ಆಗಬೇಕಾದ ಕೆಲಸಗಳಲ್ಲಿ ವಿಳಂಬವಾಗಿದ್ದರೆ ಅಥವಾ ಅಧಿಕಾರಿಗಳು ನ್ಯಾಯಯುತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ವೃಥಾ ತೊಂದರೆ ಕೊಡುತ್ತಿದ್ದರೆ ಅಥವಾ ಲಂಚ ಕೇಳುವುದು ಇತ್ಯಾದಿ ದುರಾಡಳಿತದಲ್ಲಿ ತೊಡಗಿದ್ದರೆ, ಈ ಕುರಿತು ಸಾರ್ವಜನಿಕರು ತಮ್ಮ ಕುಂದುಕೊರತೆಗಳನ್ನು ನೇರವಾಗಿ ಬಂದು ಸಲ್ಲಿಸಲು ಹಾಗೂ ಸ್ಥಳದಲ್ಲಿಯೇ ಇದ್ದ ಅಧಿಕಾರಿಗಳೊಂದಿಗೆ ಕೆಲಸ ನೆರವೇರಿಸಿಕೊಳ್ಳಲು ಅಥವಾ ಸ್ಥಳದಲ್ಲಿಯೇ ದೂರು ಅರ್ಜಿಯ ಫಾರಂ ನಂ: 1 & 2 ತೆಗೆದುಕೊಂಡು ದೂರು ನೀಡಲು ಅನುಕೂಲ ಕಲ್ಪಿಸಲಾಗಿದೆ. ಕೊಪ್ಪಳ ತಾಲ್ಲೂಕಿನ ಸಾರ್ವಜನಿಕರು ಈ ಸಭೆಯ ಸದುಪಯೋಗ ಪಡೆದುಕೊಳ್ಳಬಹುದು ಎಂದು ಕೊಪ್ಪಳ ತಹಶೀಲ್ದಾರರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande