ಬಳ್ಳಾರಿ, 11 ಜೂನ್ (ಹಿ.ಸ.) :
ಆ್ಯಂಕರ್ : ಮಾನ್ಯುವೆಲ್ ಸ್ಕ್ಯಾವೆಂಜರ್‍ಗಳ ನಿಷೇಧ ಮತ್ತು ಅವರ ಪುನರ್ವಸತಿ ಕಾಯ್ದೆ 2013 ಉಪವಿಧಿ 24(3) ರನ್ವಯ ಮ್ಯಾನುವಲ್ ಸ್ಕ್ಯಾವೆಂಜರ್ಸ್‍ಗಳ ಉಪವಿಭಾಗ ಮಟ್ಟದ ಜಾಗೃತಿ ಸಮಿತಿಗೆ ನಾಮ ನಿರ್ದೇಶಿತ ಸದಸ್ಯರನ್ನು ಆಯ್ಕೆ ಮಾಡಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಮ್ಯಾನುವಲ್ ಸ್ಕ್ಯಾವೆಂಜರ್ಸ್‍ಗಳ ಪುನರ್ವಸತಿ ಯೋಜನೆಗಾಗಿ ಕೆಲಸ ಮಾಡುವ ಅಥವಾ ಸಮುದಾಯವನ್ನು ಪ್ರತಿನಿಧಿಸುವ ಸಂಸ್ಥೆಗೆ ಸೇರಿದ ಸಾಮಾಜಿಕ ಕಾರ್ಯಕರ್ತರು ಹಾಗೂ ಉಪವಿಭಾಗದಲ್ಲಿ ಸ್ಕ್ಯಾವೆಂಜಿಂಗ್ ಸಮುದಾಯ ನಿವಾಸಿಯನ್ನು ಪ್ರತಿನಿಧಿಸುವ ಇಬ್ಬರು ಸದಸ್ಯರನ್ನು ನಾಮ ನಿರ್ದೇಶನ ಮಾಡಲು (ಕಡ್ಡಾಯವಾಗಿ 01 ಸದಸ್ಯರು ಮಹಿಳೆಯಾಗಿರತಕ್ಕದ್ದು) ಉದ್ದೇಶಿಸಲಾಗಿದೆ.
ಆಸಕ್ತಿಯುಳ್ಳವರು ಜೂನ್ 15 ರೊಳಗಾಗಿ ನಗರದ ಕೌಲ್ ಬಜಾರ್ 1ನೇ ಗೇಟ್ ಹತ್ತಿರದ ಡಾ.ಬಿ.ಆರ್.ಅಂಬೇಡ್ಕರ್ ಭವನದ ಸಹಾಯಕ ನಿರ್ದೇಶಕರ ಕಚೇರಿಗೆ ಅರ್ಜಿ ಸಲ್ಲಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್