ಜೂ.13 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ, 11 ಜೂನ್ (ಹಿ.ಸ.) : ಆ್ಯಂಕರ್ : ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 110/11 ಕೆ.ವಿ ಸೌತ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ತ್ರೈಮಾಸಿಕ ನಿರ್ವಹಣೆ ಕೈಗೊಳ್ಳುತ್ತಿರುವುದರಿಂದ ಜೂ.13 ರಂದು ಬೆಳಿಗ್ಗೆ 08 ಗಂಟೆಯಿಂದ ಸಂಜೆ 06 ಗಂಟೆಯವರೆಗೆ ಎಫ್-23, ಎಫ್-24,
ಜೂ.13 ರಂದು ವಿದ್ಯುತ್ ವ್ಯತ್ಯಯ


ಬಳ್ಳಾರಿ, 11 ಜೂನ್ (ಹಿ.ಸ.) :

ಆ್ಯಂಕರ್ : ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 110/11 ಕೆ.ವಿ ಸೌತ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ತ್ರೈಮಾಸಿಕ ನಿರ್ವಹಣೆ ಕೈಗೊಳ್ಳುತ್ತಿರುವುದರಿಂದ ಜೂ.13 ರಂದು ಬೆಳಿಗ್ಗೆ 08 ಗಂಟೆಯಿಂದ ಸಂಜೆ 06 ಗಂಟೆಯವರೆಗೆ ಎಫ್-23, ಎಫ್-24, ಎಫ್-25, ಎಫ್-46, ಎಫ್-47 ಮತ್ತು ಎಫ್-48 ಫೀಡರ್‍ಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು

ಬಳ್ಳಾರಿ ನಗರದ ಬೆಂಗಳೂರು ರಸ್ತೆ, ಅಂಧ್ರಾಳ್ ರಸ್ತೆ, ಕೊಲ್ಮಿ ಚೌಕ್, ಕಾರ್ಕಲ ತೋಟ, ಬಾಪೂಜಿ ನಗರ, ಮಿಲ್ಲರ ಪೇಟೆ, ಮೋತಿ ವೃತ್ತ, ತೇರು ಬೀದಿ, ಇಂಡಸ್ಟ್ರಿಯಲ್ ಏರಿಯಾ ಹಂತ-1, ಮಹೇಶ್ ಪೈಪ್ಸ್, ಲಾರಿ ಟರ್ಮಿನಲ್, ಜೈನ್ ಮಾರ್ಕೆಟ್, ಸಾಯಿ ಕಾಲೋನಿ, ಎಪಿಎಂಸಿ, ರಾಣಿತೋಟ, ಮರಿಸ್ವಾಮಿ ಮಠ, ದೊಡ್ಡ ಮಾರ್ಕೆಟ್, ತೋಪಿಗಲ್ಲಿ, ಬೊಮ್ಮನಾಳ್ ರೋಡ್ ಸೇರಿದಂತೆ ನಾನಾ ಕಡೆ ವಿದ್ಯುತ್ ವ್ಯತ್ಯಯವಾಗಲಿದ್ದು, ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸಬೇಕು ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande