ಅಂತಾರಾಷ್ಟ್ರೀಯ ಯೋಗ ದಿನಾಚರಣೆಗಾಗಿ ಸಿದ್ಧತೆ ಆರಂಭ
ಧಾರವಾಡ, 11 ಜೂನ್ (ಹಿ.ಸ.) : ಆ್ಯಂಕರ್ : ಜೂನ್ 21 ರಂದು ಧಾರವಾಡದ ಆರ್.ಎನ್.ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕುರಿತು ಇಂದು ನಡೆದ ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಸೂಕ್ತ ಸಿದ್ಧತೆ ಮಾಡಿಕೊಳ್ಳಲು
Meeting


ಧಾರವಾಡ, 11 ಜೂನ್ (ಹಿ.ಸ.) :

ಆ್ಯಂಕರ್ : ಜೂನ್ 21 ರಂದು ಧಾರವಾಡದ ಆರ್.ಎನ್.ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕುರಿತು ಇಂದು ನಡೆದ ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಸೂಕ್ತ ಸಿದ್ಧತೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.

ಕಾರ್ಯಕ್ರಮ ಬೆಳಿಗ್ಗೆ 6 ಗಂಟೆಗೆ ಆರಂಭವಾಗಲಿದ್ದು, ಸಾವಿರಕ್ಕೂ ಅಧಿಕ ಯೋಗಪಟುಗಳು ಭಾಗವಹಿಸುವ ನಿರೀಕ್ಷೆಯಿದೆ. ಪಾಲ್ಗೊಳ್ಳುವವರು ಟೀ ಶರ್ಟ್, ಟ್ರ್ಯಾಕ್ ಪ್ಯಾಂಟ್ ಧರಿಸಿ, ತಮ್ಮದೇ ಯೋಗಮ್ಯಾಟ್ ತರಬೇಕು. ಜೂನ್ 12 ರಿಂದ 21ರವರೆಗೆ ಪೂರ್ವಭ್ಯಾಸ ಶಿಬಿರಗಳು ನಗರದ ಹಲವೆಡೆ ನಡೆಯಲಿವೆ.

ಯೋಗ ಕಾರ್ಯಕ್ರಮ ಸ್ಥಳದಲ್ಲಿ ಆಂಬುಲೆನ್ಸ್, ಕುಡಿಯುವ ನೀರು, ಸ್ವಚ್ಛತೆ ಸೇರಿದಂತೆ ಎಲ್ಲಾ ಮೂಲಸೌಕರ್ಯಗಳನ್ನು ಒದಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿದ್ಯಾರ್ಥಿಗಳಿಗಾಗಿ ಪ್ರಬಂಧ ಹಾಗೂ ಕ್ವೀಜ್ ಸ್ಪರ್ಧೆಗಳೂ ನಡೆಯಲಿದ್ದು, ಪ್ರಮಾಣಪತ್ರ ವಿತರಣೆ ಮಾಡಲಾಗುವುದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande