ನಾಳೆ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ಜಾಥಾ
ಬೆಂಗಳೂರು, 11 ಜೂನ್ (ಹಿ.ಸ.) : ಆ್ಯಂಕರ್ : ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನʼದ ಅಂಗವಾಗಿ ಕಾರ್ಮಿಕ ಇಲಾಖೆಯು ಕರ್ನಾಟಕ ರಾಜ್ಯ ಬಾಲ ಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿ ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಸಹಯೋಗದಲ್ಲಿ ಜಾಥಾ ಕಾರ್ಯಕ್ರಮವನ್ನು ನಾಳೆ ಬೆಂಗಳೂರಿನಲ್ಲಿ ರಂದು ಹಮ್ಮಿಕೊಳ
ನಾಳೆ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ಜಾಥಾ


ಬೆಂಗಳೂರು, 11 ಜೂನ್ (ಹಿ.ಸ.) :

ಆ್ಯಂಕರ್ : ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನʼದ ಅಂಗವಾಗಿ ಕಾರ್ಮಿಕ ಇಲಾಖೆಯು ಕರ್ನಾಟಕ ರಾಜ್ಯ ಬಾಲ ಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿ ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಸಹಯೋಗದಲ್ಲಿ ಜಾಥಾ ಕಾರ್ಯಕ್ರಮವನ್ನು ನಾಳೆ ಬೆಂಗಳೂರಿನಲ್ಲಿ ರಂದು ಹಮ್ಮಿಕೊಳ್ಳಲಾಗಿದೆ.

ಬೆಂಗಳೂರಿನ ಎಂ ಜಿ ರಸ್ತೆಯ ಗಾಂಧಿ ಪ್ರತಿಮೆಯಿಂದ ಕೆ ಆರ್‌ ವೃತ್ತದವರೆಗೆ ಈ ಜಾಥಾ ನಡೆಯಲಿದೆ. ಜಾಥಾಕ್ಕೆ ಬೆಳಗ್ಗೆ 8.30 ಕ್ಕೆ ಚಾಲನೆ ದೊರೆಯಲಿದೆ.

ಜಾಥಾಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಈ ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ , ಸಂಸದ ಪಿ ಸಿ ಮೋಹನ್ ಹಾಗೂ ಶಾಸಕ ಎನ್ ಎ ಹ್ಯಾರಿಸ್ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ ಎಂದು ಕಾರ್ಮಿಕ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande