ಫ್ಯಾಶನ್ ಡಿಸೈನರ್ ತರಬೇತಿಗೆ ಅರ್ಜಿ ಆಹ್ವಾನ
ಕೊಪ್ಪಳ, 12 ಜೂನ್ (ಹಿ.ಸ.) : ಆ್ಯಂಕರ್ : ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ಕೊಪ್ಪಳ ಇವರ ವತಿಯಿಂದ 2024-25 ನೇ ಸಾಲಿನಲ್ಲಿ ಮಹಿಳಾ ತರಬೇತಿ ಯೋಜನೆಯಡಿ ನಿರುದ್ಯೋಗಿ ಮಹಿಳೆಯರಿಗೆ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ ಗಳನ್ನು ನೀಡಲು ಗಂಗಾವತಿಯ ಮೆಟ್ರೋ ಸೋಷಿಯಲ್ ಎಜುಕೇಷನ್ ಟ್ರಸ್ಟ್ ಸಂ
ಫ್ಯಾಶನ್ ಡಿಸೈನರ್ ತರಬೇತಿಗೆ ಅರ್ಜಿ ಆಹ್ವಾನ


ಕೊಪ್ಪಳ, 12 ಜೂನ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ಕೊಪ್ಪಳ ಇವರ ವತಿಯಿಂದ 2024-25 ನೇ ಸಾಲಿನಲ್ಲಿ ಮಹಿಳಾ ತರಬೇತಿ ಯೋಜನೆಯಡಿ ನಿರುದ್ಯೋಗಿ ಮಹಿಳೆಯರಿಗೆ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ ಗಳನ್ನು ನೀಡಲು ಗಂಗಾವತಿಯ ಮೆಟ್ರೋ ಸೋಷಿಯಲ್ ಎಜುಕೇಷನ್ ಟ್ರಸ್ಟ್ ಸಂಸ್ಥೆಯಿಂದ ಅಸಿಸ್ಟೆಂಟ್ ಫ್ಯಾಶನ್ ಡಿಸೈನರ್ ತರಬೇತಿಯನ್ನು ನೀಡಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಕನಿಷ್ಟ 10ನೇ ತರಗತಿ ಮುಗಿಸಿದ 18 ರಿಂದ 35 ವರ್ಷ ವಯೋಮಿತಿಯೊಳಗಿನ ಆಸಕ್ತ ಮತ್ತು ಅರ್ಹ ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳು ಆಧಾರ್ ಕಾರ್ಡ್, ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತು ಇತ್ತೀಚಿನ 6 ಭಾವಚಿತ್ರಗಳೊಂದಿಗೆ ಅರ್ಜಿಯನ್ನು ನೇರವಾಗಿ ಮೆಟ್ರೋ ಸೋಷಿಯಲ್ ಎಜುಕೇಷನ್ ಟ್ರಸ್ಟ್, ಪ್ರಶಾಂತ ನಗರ, ಗಂಗಾವತಿ, ಜಿ.ಕೊಪ್ಪಳ ವಿಳಾಸಕ್ಕೆ ಜೂನ್ 21 ರೊಳಗಾಗಿ ಅರ್ಜಿ ಸಲ್ಲಿಸಬಹುದು ಎಂದು ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande