ಬಳ್ಳಾರಿ : ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ
ಬಳ್ಳಾರಿ, 12 ಜೂನ್ (ಹಿ.ಸ.) : ಆ್ಯಂಕರ್ : ಸಮಾಜದಲ್ಲಿ ಬಾಲಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ತೊಡೆದು ಹಾಕಲು ಅಧಿಕಾರಿಗಳು, ಪೋಷಕರು ಹಾಗೂ ಇತರೆ ಸಂಘ-ಸಂಸ್ಥೆಗಳು ಒಗ್ಗೂಡಬೇಕಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಎನ್.
Bellary: World Day Against Child Labor celebrated


Bellary: World Day Against Child Labor celebrated


Bellary: World Day Against Child Labor celebrated


ಬಳ್ಳಾರಿ, 12 ಜೂನ್ (ಹಿ.ಸ.) :

ಆ್ಯಂಕರ್ : ಸಮಾಜದಲ್ಲಿ ಬಾಲಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ತೊಡೆದು ಹಾಕಲು ಅಧಿಕಾರಿಗಳು, ಪೋಷಕರು ಹಾಗೂ ಇತರೆ ಸಂಘ-ಸಂಸ್ಥೆಗಳು ಒಗ್ಗೂಡಬೇಕಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಎನ್.ಹೊಸಮನೆ ಅವರು ಹೇಳಿದ್ದಾರೆ.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕಾರ್ಮಿಕ ಇಲಾಖೆ, ಪೆÇಲೀಸ್ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನೆ, ಜಿಲ್ಲಾ ವಕೀಲರ ಸಂಘ, ವಿವಿಧ ಇಲಾಖೆಗಳು ಮತ್ತು ಇತರೆ ಸಂಘ-ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಗುರುವಾರ ಏರ್ಪಡಿಸಿದ್ದ ‘ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ದೇಶದಲ್ಲಿ ಬಾಲಕಾರ್ಮಿಕ ಪದ್ಧತಿ ನಿಷೇಧಿಸಲಾಗಿದ್ದು, ಇಂದಿಗೂ ಬಡತನವೆನ್ನುವುದು ಅನೇಕ ಮಕ್ಕಳನ್ನು ದುಡಿಯುವಂತೆ ಮಾಡುತ್ತಿದ್ದು ವಿಶ್ವದಾದ್ಯಂತ 16 ಕೋಟಿ ಮಕ್ಕಳು ಬಾಲ ಕಾರ್ಮಿಕರಾಗಿ ದುಡಿಯುತ್ತಲೇ ಇದ್ದಾರೆ. ಎಂದು ತಿಳಿಸಿದರು.

ಮಕ್ಕಳ ಬಾಲ್ಯವನ್ನು ಕಸಿದುಕೊಳ್ಳುತ್ತಿರುವ ಬಾಲಕಾರ್ಮಿಕತನವನ್ನು ತೊಡೆದು ಹಾಕಲು ಕೇವಲ ಸರ್ಕಾರಗಳಿಂದ ಮಾತ್ರ ಸಾಧ್ಯವಾಗದು. ಇದಕ್ಕೆ ಅಧಿಕಾರಿಗಳು, ಪೋಷಕರು, ಸಾರ್ವಜನಿಕರು ಹಾಗೂ ಇತರೆ ಸಂಘ-ಸಂಸ್ಥೆಗಳು ಒಗ್ಗೂಡಿ ಕಾರ್ಯಾಚರಣೆ ನಡೆಸಬೇಕಿದೆ ಎಂದು ಅವರು ಅಭಿಪ್ರಾಯಪಟ್ಟರು.

ಇದಕ್ಕೂ ಮುನ್ನ ಅಪರ ಜಿಲ್ಲಾಧಿಕಾರಿಯವರು ‘ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ’ ಅಂಗವಾಗಿ ಪ್ರತಿಜ್ಞಾವಿಧಿ ಭೋದಿಸಿದರು.

ಈ ಸಂದರ್ಭದಲ್ಲಿ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ವಿಜಯಲಕ್ಷ್ಮಿ ಮೈದೂರು, ಬಳ್ಳಾರಿ ಉಪ ವಿಭಾಗ ಕಾರ್ಮಿಕ ಅಧಿಕಾರಿ ಸಿದ್ದಪ್ಪಜಿ. ಖೈನೂರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ್ ಕುಮಾರ್, ಅಧಿಕಾರಿ ರಾಮಕೃಷ್ಣ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎಳೆನಾಗಪ್ಪ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಪಿ.ರಾಮಬ್ರಹ್ಮಂ, ಕಾರ್ಯದರ್ಶಿ ಸಿ.ಎ ಗುರುಬಸವರಾಜ್, ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಎ.ಮೌನೇಶ್, ಕಾರ್ಮಿಕ ನಿರೀಕ್ಷಕರಾದ ಪರಶುರಾಮ್, ರಮೇಶ್ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು ಮತ್ತು

ಶಾಲಾ-ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande