ಮಂಗಳೂರು, 12 ಜೂನ್ (ಹಿ.ಸ.) :
ಆ್ಯಂಕರ್ : ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಅಂಗನವಾಡಿ, ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ.
ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮಳೆ ಮುಂದುವರೆಯುವ ಸೂಚನೆಯಿದ್ದು, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಣೆಯಾಗಿದೆ.
ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಹಕಲವು ತುರ್ತು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸಬೇಕು ಹಾಗೂ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa