ರಾಯಚೂರು, 12 ಜೂನ್ (ಹಿ.ಸ.) :
ಆ್ಯಂಕರ್ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಇಲಾಖೆಯಲ್ಲಿ ಖಾಲಿ ಇರುವ ಉಪನ್ಯಾಸಕರು ಹಾಗೂ ಶಿಕ್ಷಕರ ಹುದ್ದೆಗಳಿಗೆ ಜೂನ್ 13 ಹಾಗೂ 14ರಂದು ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದ್ದು, 1:2ರ ಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ಭಾಗವಹಿಸುವಂತೆ ಕೋರಲಾಗಿದೆ.
ಶೈಕ್ಷಣಿಕ ಸಾಲಿಗೆ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ನೇರ ನೇಮಕಾತಿ/ಬಡ್ಡಿ/ವರ್ಗಾವಣೆ ಮೂಲಕ ಹುದ್ದೆ ಭರ್ತಿ ಮಾಡುವವರಿಗೆ ಅಥವಾ ಪ್ರಸಕ್ತ ಶೈಕ್ಷಣಿಕ ಸಾಲಿನ ಅಂತ್ಯವರೆಗೆ ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜು ಮತ್ತು ಮೌಲಾನಾ ಆಜಾದ್ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕರು ಹಾಗೂ ಡಾ.ಎಪಿಜೆ, ಅಬ್ದುಲ್ ಕಲಾಂ ವಸತಿ ಶಾಲೆ, ಮೊರಾರ್ಜಿ ದೇಸಾಯಿ ವಸತಿ ಶಾಲೆ, ಸರ್ಕಾರಿ ಮುಸ್ಲಿಂ ವಸತಿ ಶಾಲೆ, ಮೌಲಾನಾ ಆಜಾದ್ ಮದರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಎದುರಾಗಿ ತಾತ್ಕಾಲಿಕವಾಗಿ ಅತಿಥಿ ಉಪನ್ಯಾಸಕರು ಹಾಗೂ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅರ್ಜಿಗಳನ್ನು ಅಹ್ವಾನಿಸಲಾಗಿದ್ದು, ಹಾಗೂ ಈ ಶಿಕ್ಷಕರು ಮತ್ತು ಉಪನ್ಯಾಸಕರನ್ನು ನಿಯಮಾನುಸಾರ ಆಯ್ಕೆ ಮಾಡುವ ಸಂಬಂಧ ಸಾಮಾನ್ಯ ಪರೀಕ್ಷೆಯನ್ನು ಜೂನ್ 01 ರಂದು ಸಾಮಾನ್ಯ ಪರೀಕ್ಷೆಯನ್ನು ನಡೆಸಲಾಗಿರುತ್ತದೆ.
ಅದರಂತೆ ತಾತ್ಕಾಲಿಕವಾಗಿ ಆಯ್ಕೆ ಮಾಡಿಕೊಳ್ಳುವ ಸಂಬಂಧ ಅಭ್ಯರ್ಥಿಗಳಿಗೆ ಅಲ್ಪಸಂಖ್ಯಾತರ ಮೊರಾರ್ಜಿದೇಸಾಯಿ ವಸತಿ ಶಾಲೆ ಬೋಳಮಾನದೋಡ್ಡಿ ರಸ್ತೆ ರಾಯಚೂರು ಇಲ್ಲಿ ಜೂನ್ 13 ರಂದು ಉಪನ್ಯಾಸಕರಿಗೆ ಹಾಗೂ ಜೂನ್ 14 ರಂದು ಅತಿಥಿ ಶಿಕ್ಷಕರಿಗೆ ಸಂದರ್ಶನ (ಡೆಮೋ) ಏರ್ಪಡಿಸಲಾಗಿದ್ದು, 1:2ರ ಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ಮೂಲ ದಾಖಲೆಗಳು, 02 ಭಾವಚಿತ್ರಗಳು (ಫೋಟೋ) ಮತ್ತು ಪ್ರವೇಶ ಪತ್ರದೊಂದಿಗೆ ಕಡ್ಡಾಯವಾಗಿ ಹಾಜರಾಗಬೇಕು. ತಪ್ಪಿದಲ್ಲಿ ಗೈರು ಹಾಜರೆಂದು ಪರಿಗಣಿಸಿ ಆಯ್ಕೆ ಪ್ರಕ್ರಿಯೆಯಿಂದ ಕೈಬಿಡಲಾಗುವುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ: ರಾಯಚೂರು 9731028420, ಮಾನವಿ, ಸಿರವಾರ 8867334785, ದೇವದುರ್ಗ 8884149056, ಲಿಂಗಸುಗೂರು, ಮಸ್ಕಿ ಮತ್ತು ಸಿಂಧನೂರು 9740871306, 8217621732, 8884977468ಗೆ ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್